Advertisement

ಇಟ್ಟಿಗೆ ಭಟ್ಟಿಗಳ ಮೇಲೆ ದಾಳಿ: ಬಾಲ ಕಾರ್ಮಿಕ ಪತ್ತೆ

11:39 AM Dec 25, 2019 | Team Udayavani |

ಬಾಗಲಕೋಟೆ: ಹುನಗುಂದ ತಾಲೂಕಿನ ಬಲಕುಂದಿ ಬಳಿ ಇಟ್ಟಿಗೆ ಭಟ್ಟಿಗಳ ಮೇಲೆ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಇಟ್ಟಂಗಿ ಭಟ್ಟಿಯ ಮೇಲೆ ಕಾರ್ಮಿಕ ನಿರೀಕ್ಷಕರು, ಯೋಜನಾ ನಿರ್ದೇಶಕರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ, ಪೊಲೀಸ್‌ ಹಾಗೂ 1098 ಮಕ್ಕಳ ಸಹಾಯವಾಣಿ ಅಧಿಕಾರಿಗಳ ತಂಡ ನಡೆಸಿದ ದಾಳಿಯಲ್ಲಿ ಭಟ್ಟಿಯಲ್ಲಿ ಬಾಲಕಾರ್ಮಿಕ ಪತ್ತೆಯಾಗಿದ್ದು, ಭಟ್ಟಿಯ ಮಾಲೀಕ ಬಸಪ್ಪ ಕುಂಬಾರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.  ಬಾಲಕನನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next