Advertisement
ಎಡನೀರು ಸಂಸ್ಥಾನವು ಪರಂಪರಾಗತವಾಗಿ ಕಲೆ-ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುತ್ತಾ ಬಂದಿದೆ. ಕನ್ನಡದ ಅಸ್ಮಿತೆಯನ್ನು ಉಳಿಸಿ ಕೊಳ್ಳುವಲ್ಲಿ ಬಹಳ ಮುಖ್ಯವಾದ ಪಾತ್ರವನ್ನು ವಹಿಸಿದೆ. ಶ್ರೀಗಳ ಮೇಲೆ ನಡೆದಿರುವ ದಾಳಿ ಕನ್ನಡದ ಮೇಲೆ ನಡೆದಿರುವ ದಾಳಿ ಎಂದು ಭಾವಿಸಲಾಗುತ್ತದೆ. ಕೇರಳದಲ್ಲಿರುವ ಕನ್ನಡಿಗರಿಗೆ ರಕ್ಷಣೆಯನ್ನು ಒದಗಿಸಲು ಅಲ್ಲಿನ ಸರಕಾರದ ಮೇಲೆ ಒತ್ತಡ ಹೇರಬೇಕೆಂದು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
ಎಡನೀರು ಮಠದ ಸಚ್ಚಿದಾನಂದ ಭಾರತೀತೀರ್ಥ ಶ್ರೀಗಳ ಕಾರಿನ ಮೇಲೆ ನಡೆದಿರುವ ಹಲ್ಲೆ ಯತ್ನವನ್ನು ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ಎಕೆಬಿಎಂಎಸ್) ತೀವ್ರವಾಗಿ ಖಂಡಿಸಿದೆ. ಹಿಂದೂಗಳು ಶ್ರದ್ಧಾ ಭಕ್ತಿಯಿಂದ ಆರಾಧಿಸುವವರ ಮೇಲಿನ ಈ ಕೃತ್ಯ ಸಲ್ಲ. ಈ ಕೂಡಲೇ ಕೇರಳ ಸರಕಾರವು ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ ತಪ್ಪಿತಸ್ಥರನ್ನು ಬಂಧಿಸಿ ಕಠಿನ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಶ್ರೀಗಳಿಗೆ ಸೂಕ್ತ ಭದ್ರತೆಯನ್ನು ಸರಕಾರದ ಕಡೆಯಿಂದ ಕಲ್ಪಿಸಬೇಕೆಂದು ಎಂದು ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಆಗ್ರಹಿಸಿದ್ದಾರೆ.