Advertisement

ಚೆನ್ನೈ ಬಿಜೆಪಿ ಕಚೇರಿ ಮೇಲೆ ಬಾಂಬ್ ದಾಳಿ ಖಂಡನೀಯ: ಸಿ.ಟಿ.ರವಿ

02:49 PM Feb 10, 2022 | Team Udayavani |

ಬೆಂಗಳೂರು: ಚೆನ್ನೈನಲ್ಲಿ ಬಿಜೆಪಿ ಕಚೇರಿ ಮೇಲೆ ಅಪರಿಚಿತರು ಪೆಟ್ರೋಲ್ ಬಾಂಬ್ ದಾಳಿ ನಡೆಸಿರುವುದು ಅತ್ಯಂತ ಖಂಡನೀಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಅವರು ಹೇಳಿಕೆ ನೀಡಿದ್ದಾರೆ.

Advertisement

ನಮ್ಮದು ಪ್ರಜಾಪ್ರಭುತ್ವದ ದೇಶವಾಗಿದ್ದು, ಇಂಥ ಕೃತ್ಯಗಳಿಗೆ ಅವಕಾಶವಿಲ್ಲ ಎಂದು ಅವರು ತಿಳಿಸಿದ್ದಾರೆ.ಫೆಬ್ರವರಿ 10 ರಂದು ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೂ ಮುನ್ನ ದೇಶದಲ್ಲಿ ಶಾಂತಿ ಕದಡುವ ಪ್ರಯತ್ನ ನಡೆದಿದೆ. ಇದು ಖಂಡನಾರ್ಹ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟುಕೊಂಡ ರಾಷ್ಟ್ರೀಯ ಪಕ್ಷವಾಗಿದೆ. ಈ ರೀತಿಯ ದುಷ್ಕೃತ್ಯ ಅಥವಾ ದಾಳಿಗಳಿಂದ ಬಿಜೆಪಿಯನ್ನು ಕುಗ್ಗಿಸಲು ಸಾಧ್ಯವಿಲ್ಲ. ಸ್ವಾತಂತ್ರ್ಯಾನಂತರದಿಂದ ಇಂಥ ಅನೇಕ ದುರ್ಘಟನೆಗಳನ್ನು ಜನಸಂಘ ಮತ್ತು ಬಿಜೆಪಿ ಕಾರ್ಯಕರ್ತರು ಧೈರ್ಯದಿಂದ ಎದುರಿಸಿ ಪಕ್ಷವನ್ನು ಬೆಳೆಸಿದ್ದಾರೆ. ಆದ್ದರಿಂದ ಇಂಥ ದುಷ್ಕೃತ್ಯದಿಂದ ಪಕ್ಷಕ್ಕೆ ಯಾವುದೇ ಹಿನ್ನಡೆ ಆಗುವುದಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ದುಷ್ಕೃತ್ಯಕ್ಕೆ ಮುಂದಾದವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next