ಶಿವಮೊಗ್ಗ: ಶ್ರೀಗಂಧ ಮರ ಕಳ್ಳಸಾಗಾಣಿಕೆಯನ್ನು ತಡೆಯಲಯ ಹೋದ ಅಧಿಕಾರಿಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಇಲ್ಲಿನ ಸೋನಲೆಯಲ್ಲಿ ಗುರುವಾರ ನಡೆದಿದೆ.
ಗಂಧ ಕಳ್ಳಸಾಗಾಣಿಕೆ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಹೊಸನಗರ ತಾಲೂಕಿನ ಸೊನಲೆ ಸಮೀಪದ ಹೆಗ್ಗರಸು ಗ್ರಾಮಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದ ಮೇಲೆ ದುಷ್ಕರ್ಮಿಗಳು ಗಂಧದ ತುಂಡು ಮತ್ತು ಮಚ್ಚು ಮುಂತಾದ ಮಾರಕಾಸ್ತ್ರಗಳಿಂದ ದಾಳಿ ಮಾಡಲಾಗಿದೆ.
ಹಲ್ಲೆಯಲ್ಲಿ ಡಿಆರ್ ಎಫ್ ಓ ಗೋವಿಂದ ರಾಜ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದು, ಗಾಯಗೊಂಡ ಗೋವಿಂದರಾಜ್ ಗೆ ಹೊಸನಗರ ಸರ್ಕಾರಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳೀಯರಾದ ಕುಮಾರ್, ಮೋಹನ್ ಸೇರಿದಂತೆ ಐವರಿದ್ದ ತಂಡದಿಂದ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದ್ದು, ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆ ಮೇಲಾಧಿಕಾರಿಗಳು ಭೇಟಿ ನೀಡಿದ್ದು, ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.