ಚಿಕ್ಕಮಗಳೂರು: ಅರಣ್ಯ ವ್ಯಾಪ್ತಿಯಲ್ಲಿರುವ ಗುಡಿಸಲು ತೆರವು ಮಾಡಲು ಬಂದ ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೂವೇ ಗ್ರಾಮದಲ್ಲಿ ನಡೆದಿದೆ.
ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಹಲ್ಲೆಯ ವಿಡಿಯೋ ವೈರಲ್ ಆದ ಕಾರಣ ಪ್ರಕರಣ ಬೆಳಕಿಗೆ ಬಂದಿದೆ.
ಪ್ರವೀಣ್ ಎಂಬವರ ಗುಡಿಸಲು ಅರಣ್ಯ ಪ್ರದೇಶದಲ್ಲಿದೆ ಎಂಬ ಕಾರಣಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಗುಡಿಸಲು ತೆರವು ಮಾಡಲು ತೆರಳಿದ್ದರು. ಆದರೆ ಈ ವೇಳೆ ಕುಟುಂಬ ಮತ್ತು ಅಧಿಕಾರಿಗಳ ನಡುವೆ ವಾಗ್ವಾದ ನಡೆದಿದೆ. ಗುಡಿಸಲು ಅರಣ್ಯ ವ್ಯಾಪ್ತಿಯಲ್ಲಿದೆ ಎಂದು ಅಧಿಕಾರಿಗಳ ವಾದ ಮಾಡಿದರೆ, ಈ ಜಾಗ ನಮ್ಮದು ಎಂದು ಮನೆಯವರ ವಾದ ಮಾಡಿದ್ದಾರೆ.
ಈ ವೇಳೆ ಅರಣ್ಯ ಸಿಬ್ಬಂದಿ ಚಂದನ್ ಗೌಡ ಮೇಲೆ ದೊಣ್ಣೆಯಿಂದ ಪ್ರವೀಣ್ ಎಂಬಾತ ಹಲ್ಲೆ ಮಾಡಿದ್ದು, ಇದರ ವಿಡಿಯೋ ವೈರಲ್ ಆಗಿದೆ. ಆರೋಪಿ ಪ್ರವೀಣ್ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.
ಇದನ್ನೂ ಓದಿ:ಕೋವಿಡ್ ನಂತೆ ಜಾನುವಾರುಗಳಲ್ಲಿ ಹರಡುತ್ತಿದೆ ರೋಗ: ಮಲೆನಾಡಿನಲ್ಲಿ ಚರ್ಮಗಂಟು ರೋಗ ಭೀತಿ
ಮಲೆನಾಡಿನಲ್ಲಿ ಅರಣ್ಯ ಇಲಾಖೆ ಮತ್ತು ಜನರ ನಡುವೆ ನಿರಂತರವಾಗಿ ಸಂಘರ್ಷ ನಡೆಯುತ್ತಿದೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.