Advertisement

Bangalore: ಹುಕ್ಕಾ ಬಾರ್‌ ಮೇಲೆ ದಾಳಿ; 4 ಸೆರೆ

02:11 PM Feb 20, 2024 | Team Udayavani |

ಬೆಂಗಳೂರು: ರಾಜ್ಯದಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ ನಿಷೇಧ ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿ ದರೂ ಕೆಲ ಪಬ್‌ ಹಾಗೂ ಹುಕ್ಕಾ ಬಾರ್‌ಗಳು ಅಕ್ರಮವಾಗಿ ಹುಕ್ಕಾಉತ್ಪನ್ನಗಳ ಮಾರಾಟ ಮಾಡುತ್ತಿ ರುವುದು ಬೆಳಕಿಗೆ ಬಂದಿದೆ.

Advertisement

ಈ ಹಿನ್ನೆಲೆಯಲ್ಲಿ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಮಹಿಳಾ ಸಂರಕ್ಷಣಾ ದಳ ಪೊಲೀಸರು ಅಶೋಕ ನಗರದ ವುಡ್‌ಸ್ಟ್ರೀಟ್‌ಲ್ಲಿರುವ “ಸಿ7 ಆರ್‌ ಲಾಂಜ್‌’ ಎಂಬ ಹುಕ್ಕಾಬಾರ್‌ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಹುಕ್ಕಾ ಸೇದಲು ಬಳಸುವ ಉಪಕರಣಗಳ, ಹುಕ್ಕಾ ಉತ್ಪನ್ನಗಳು ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.

ಈ ಸಂಬಂಧ ಹುಕ್ಕಾ ಬಾರ್‌ ಮಾಲೀಕ ಶಹಬಾಜ್‌ ಬಾಷಾ, ಆತನ ಸಹಚರರಾದ ಗಣೇಶ್‌, ಸಚಿನ್‌ ಮತ್ತು ಇತರರು ವಿರುದ್ಧ ಅಶೋಕ ನಗರ ಠಾಣೆಯಲ್ಲಿ ಕೋಟಾ³ ಕಾಯ್ದೆ ಮತ್ತು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, ವಿಷ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕೆಲ ದಿನಗಳ ಹಿಂದೆ ಹುಕ್ಕಾ ಉತ್ಪನ್ನಗಳ ಮಾರಾಟ ಮತ್ತು ಸಂಗ್ರಹಕ್ಕೆ ನಿಷೇಧ ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದರೂ, ಆರೋಪಿ ಶಹಬಾಜ್‌ ಬಾಷಾ ಹುಕ್ಕಾ ಉತ್ಪನ್ನಗಳ ಮಾರಾಟ ಮಾಡುತ್ತಿದ್ದ. ಜತೆಗೆ ಅವಧಿ ಮೀರಿ ಬಾರ್‌ ನಡೆಸುತ್ತಿದ್ದ. ಈ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ.

ಈ ಸಂಬಂಧ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿಗಳನ್ನು ಬಂಧಿಸಲು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ನಾಲ್ವರು ಆರೋಪಿ ಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next