Advertisement
ದೇವನಹಳ್ಳಿ ಪೊಲೀಸ್ ಠಾಣೆ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ತಂಬಾಕು ನಿಯಂತ್ರಣದ ಉನ್ನತ ಮಟ್ಟದ ಸಮಿತಿ ವತಿಯಿಂದ ನಡೆದ ಕಾರ್ಯಾಚರಣೆಯಲ್ಲಿ ನಗರದ ಕೆಎಸ್‌ಆರ್ಟಿಸಿ ಬಸ್ ನಿಲ್ದಾಣ, ವಿಜಯಪುರ ಸರ್ಕಲ್,ರಾಣಿ ಸರ್ಕಲ್, ಹಳೇ ಬಸ್ ನಿಲ್ದಾಣ, ಆರ್‌ಟಿಓ ಸುತ್ತಮುತ್ತಲ ಪ್ರದೇಶ, ಹೆದ್ದಾರಿ ಅಕ್ಕಪಕ್ಕದ ಪ್ರದೇಶ ಸೇರಿದಂತೆ ಇತರ ಪ್ರದೇಶಗಳಲ್ಲಿ ದಾಳಿ ನಡೆಸಿದರು. ಹೋಟೆಲ್, ಬಸ್ ನಿಲ್ದಾಣಗಳು ತಂಬಾಕು ಮಾರಾಟ ಮಾಡುವ ಅಂಗಡಿ ಮುಂಗಟ್ಟುಗಳು, ಶಾಲಾ-ಕಾಲೇಜುಗಳ ಸುತ್ತಮುತ್ತಲಿನ ಪ್ರದೇಶ ಬಾರ್ ಮತ್ತು ರೆಸ್ಟೋರೆಂಟ್‌ಗಳು ಸೇರಿದಂತೆ ವಿವಿಧೆಡೆ ದಾಳಿ ನಡೆಸಿದ ಅಧಿಕಾರಿಗಳು ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ, ಶಾಲಾ-ಕಾಲೇಜುಗಳ ಬಳಿ
ತಂಬಾಕು ಉತ್ಪನ್ನಗಳ ಮಾರಾಟ, ಅಕ್ರಮ ತಂಬಾಕು ಉತ್ಪನ್ನಗಳ ಮಾರಾಟ, ತಂಬಾಕು ಉತ್ಪನ್ನಗಳ ಅನಧಿಕೃತ ಜಾಹೀರಾತುಗಳ ಪ್ರದರ್ಶನ ಸೇರಿದಂತೆ ಇನ್ನಿತರ ಉಲ್ಲಂಘನೆ ಮಾಡುತ್ತಿದ್ದವರ ವಿರುದ್ಧ ಕ್ರಮ ಜರುಗಿಸಿದ್ದಾರೆ.
ಪ್ರಕರಣ ದಾಖಲು ಮಾಡಲಾಗಿದೆ. ಸ್ಥಳದಲ್ಲೇ 20, 900 ರೂ. ದಂಡ ವಸೂಲಿ ಮಾಡಲಾಗಿದೆ. ತಂಬಾಕು ದುಷ್ಪರಿಣಾಮದ ಕುರಿತು ಹಾಗೂ ಕೋಟಾ ಕಾಯ್ದೆ ಕುರಿತು ಈಗಾಗಲೇ ರಾಜ್ಯಾದ್ಯಂತ ಸಾಕಷ್ಟು ಪ್ರಮಾಣದ ಜನಜಾಗೃತಿ ಕಾರ್ಯಕ್ರಮ ಕೈಗೊಳ್ಳಲಾಗಿದೆ. ಉಪ ಪೊಲೀಸ್ ಆಯುಕ್ತರ ಆದೇಶದ್ವನಯ ತಂಬಾಕು ನಿಯಂತ್ರಣ ಕಾಯ್ದೆ ಸಮರ್ಪಕ ಅನುಷ್ಠಾನದ ಉದ್ದೇಶದಿಂದ ವಿಭಾಗಾದ್ಯಂತ ಪ್ರತಿ ತಾಣ ಮಟ್ಟದಲ್ಲಿ ವಿಶೇಷ ಕಾರ್ಯಾಚರಣೆ/ದಾಳಿ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು. 60 ಸಾವಿರ ರೂ. ದಂಡ: ತಂಬಾಕು ನಿಯಂತ್ರಣ ಯೋಜನೆ ಜಾಗೃತ ದಳ ಸದಸ್ಯ ಜಾನ್ ಕೆನಡಿ ಮಾತನಾಡಿ, ರಾಜ್ಯ ಹೈಕೋರ್ಟ್ ಆದೇಶದಂತೆ ತಂಬಾಕು ಉತ್ಪನ್ನ ಮಾರಾಟ ನಿಯಂತ್ರಣಕ್ಕೆ ಉನ್ನತಮಟ್ಟದ ಜಾಗೃತ ದಳ ನೇಮಕಮಾಡಿ ಮಾರಾಟಕ್ಕೆ ಕಡಿವಾಣ ಹಾಕಲು ಈಗಾಗಲೇ ಸಮಿತಿ ರಚಿಸಿದೆ ಎಂದರು.
Related Articles
Advertisement
ಇದೇ ಸಂದರ್ಭದಲ್ಲಿ ತಂಬಾಕು ನಿಯಂತ್ರಣ ಯೋಜನಾ ಜಾಗೃತ ದಳದ ಸಮಿತಿ ಸದಸ್ಯರಾದ ಅಮಿತ್ ಕಾರ್ನಿಕ್, ಎನ್.ಜಿ.ಅಚ್ಯುತ, ಪೊಲೀಸ್ ಉಪನಿರೀಕ್ಷಕ ನಂದೀಶ್ ಮತ್ತಿತರರಿದ್ದರು.