Advertisement

ಪತ್ರಕರ್ತರ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಗ್ರಹ

04:55 PM Jun 02, 2022 | Team Udayavani |

ಶಹಾಪುರ: ಬಸವ ಕಲ್ಯಾಣದಲ್ಲಿ ಮಾಧ್ಯಮದವರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

Advertisement

ಈ ವೇಳೆ ಮಾತನಾಡಿದ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾರಾಯಣಾಚಾರ್ಯ ಸಗರ, ಬಸವಕಲ್ಯಾಣದಲ್ಲಿ ಸುದ್ದಿಗಾಗಿ ತೆರಳಿದ್ದ ಖಾಸಗಿ ವಾಹಿನಿಯೊಂದರ ವರದಿಗಾರ ಹಾಗೂ ಕ್ಯಾಮೆರಾ ಮ್ಯಾನ್‌ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದು ಖಂಡನೀಯ. ಈ ಕೂಡಲೇ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕಾರಂಗದ ಮೇಲೆ ದಬ್ಟಾಳಿಕೆ, ದೌರ್ಜನ್ಯ ನಡೆಯುತ್ತಿರುವುದು ಶೋಚನೀಯ. ಪತ್ರಿಕಾರಂಗ ಶೋಷಿತರ ಪರ, ಅಸಹಾಯಕರ ಪರ, ಸಾರ್ವಜನಿಕರ ಹಿತ ದೃಷ್ಟಿಯಿಂದ ಕೆಲಸ ಮಾಡುತ್ತದೆ. ಭ್ರಷ್ಟಚಾರದ ವಿರುದ್ಧ ಧ್ವನಿ ಎತ್ತುವ ಮೂಲಕ ಪತ್ರಿಕಾರಂಗ ಸಾಕಷ್ಟು ಬಾರಿ ಜಾಗೃತಿ ಮೂಡಿಸಿದೆ. ಮಾಧ್ಯಮದ ರಕ್ಷಣೆಗೆ ಸರ್ಕಾರ ನೂತನ ಕಾಯ್ದೆ ಜಾರಿಗೊಳಿಸಬೇಕೆಂದು ಮನವಿ ಮಾಡಿದರು.

ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಆಲೂರ ಮನವಿ ಪತ್ರ ಓದಿ ಗ್ರೇಡ್‌-2 ತಹಶೀಲ್ದಾರ್‌ಗೆ ಸಲ್ಲಿಸಿದರು. ಗೌರವಾಧ್ಯಕ್ಷ ಮಲ್ಲಿಕಾರ್ಜುನ ಮುದ್ನೂರ, ಹಿರಿಯ ಪತ್ರಕರ್ತರಾದ ಈರಣ್ಣ ಹಾದಿಮನಿ, ಟಿ. ನಾಗೇಂದ್ರ, ಮಲ್ಲಯ್ಯ ಪೋಲಂಪಲ್ಲಿ, ಚಂದ್ರು ಕಟ್ಟಿಮನಿ, ಭಾಗೇಶ ರಸ್ತಾಪುರ, ಬಸವರಾಜ ಕರೇಗಾರ, ಚನ್ನು ದೊಡ್ಮನಿ, ರಾಜೇಶ ಗುತ್ತೇದಾರ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next