Advertisement

ಶಾಸಕರ ಮೇಲಿನ ಹಲ್ಲೆ ಖಂಡನೀಯ: ಈಶ್ವರಪ್ಪ

12:54 AM Jul 11, 2019 | Lakshmi GovindaRaj |

ಬೆಂಗಳೂರು: ವಿಧಾನಸೌಧದಲ್ಲೇ ಸಚಿವರು, ಕಾಂಗ್ರೆಸ್‌ ಶಾಸಕರು ರಾಜೀನಾಮೆ ನೀಡಿದ ಶಾಸಕರ ಮೇಲೆ ಹಲ್ಲೆ ನಡೆಸಿ ದಬ್ಟಾಳಿಕೆ ನಡೆಸಿರುವುದು ಖಂಡನೀಯ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಹೇಳಿದರು.

Advertisement

ರಾಜ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ಮಾತನಾಡಿದ ಅವರು, ವಿಧಾನಸೌಧದಲ್ಲಿ ಹಲ್ಲೆ ಘಟನೆ ನಡೆದಿರುವುದು ಗೊತ್ತಿದ್ದರೂ ಸ್ಪೀಕರ್‌ ಅವರು ಹಲ್ಲೆಗೆ ಒಳಗಾದವರಿಗೆ ರಕ್ಷಣೆಗೆ ಧಾವಿಸದಿರುವುದು ಅಚ್ಚರಿ ಮೂಡಿಸಿದೆ. ಸುಧಾಕರ್‌ ಅವರನ್ನು ಎಳೆದಾಡಿ ಕರೆದೊಯ್ದು ಕೊಠಡಿಯಲ್ಲಿ ಕೂಡಿ ಹಾಕಿರುವ ದೃಶ್ಯ, ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದು, ಕೂಡಲೇ ಸಂಬಂಧಪಟ್ಟವರ ವಿರುದ್ಧ ಕ್ರಮ ಜರುಗಿಸಬೇಕು.

ರಾಜೀನಾಮೆ ನೀಡುವವರಿಗೆ ಸ್ಪೀಕರ್‌ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು. ಬಿಜೆಪಿ ಶಾಸಕರನ್ನು ಸೆಳೆಯುತ್ತಿದೆ ಎಂದು ಕಾಂಗ್ರೆಸ್‌, ಜೆಡಿಎಸ್‌ ನಾಯಕರು ಆರೋಪಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್‌, ಜೆಡಿಎಸ್‌ನ ನಿಷ್ಠಾವಂತ ಶಾಸಕರೇ ಅವರ ಪಕ್ಷದವರ ವಿರುದ್ಧ ಸಿಡಿದೆದ್ದಿದ್ದಾರೆ. ಹಿರಿಯ ನಾಯಕರು ಮನವಿ ಮಾಡಿದರೂ ವಾಪಸ್ಸಾಗಿಲ್ಲ. ಹಾಗಾಗಿ, ಎಚ್‌.ಡಿ.ದೇವೇಗೌಡರು, ಎಚ್‌.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರು ಬಿಜೆಪಿ ಹಾಗೂ ರಾಜ್ಯದ ಜನರ ಕ್ಷಮೆ ಯಾಚಿಸಬೇಕು ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next