Advertisement

ಪೊಲೀಸ್ ಗುಂಪಿನ ಮೇಲೆ ಉಗ್ರರ ದಾಳಿ: ಇಬ್ಬರು ಪೊಲೀಸರ ಸಾವು

03:44 PM Aug 14, 2020 | keerthan |

ಶ್ರೀನಗರ (ಜಮ್ಮು ಕಾಶ್ಮೀರ): ಇಲ್ಲಿನ ನೌಗಾಮ್ ಬೈಪಾಸ್ ಬಳಿಯಲ್ಲಿ ಪೊಲೀಸರ ಗುಂಪಿನ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಪೊಲೀಸರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ.

Advertisement

ಶ್ರೀನಗರದ ಹೊರವಲಯದಲ್ಲಿರುವ ನೌಗಾಮ್ ಬೈಪಾಸ್ ನಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ.

ಜಮ್ಮು ಕಾಶ್ಮೀರ ಪೊಲೀಸರು ಈ ಘಟನೆಯ ಮಾಹಿತಿಯನ್ನು ಖಚಿತ ಪಡಿಸಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿತಾದರೂ, ಇಬ್ಬರು ಮರಣ ಹೊಂದಿದ್ದಾರೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಪೊಲೀಸರ ಮೇಲೆ ಅಚಾನಕ್ಕಾಗಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು ಎಂದು ತಿಳಿದುಬಂದಿದೆ. ಸ್ಥಳವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ಉಗ್ರರಿಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಉಗ್ರರು ಈ ದಾಳಿ ನಡೆಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next