Advertisement
ನಿಷೇಧಾಜ್ಞೆಯ ನಡುವೆಯೂ ನಡೆದ ಶಾಂತಿಯುತ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಸದ ನಳಿನ್ ಕುಮಾರ್ ಕಟೀಲ್,ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಬಿಜೆಪಿ ನಾಯಕರು, ಸಂಘ ಪರಿವಾರದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Related Articles
ಸಂಸದೆ ಶೋಭಾ ಕರಂದ್ಲಾಜೆ ಅವರು ಹಲ್ಲೆಗೀಡಾಗಿರುವ ಶರತ್ ಅವರ ಬಿ.ಸಿ.ರೋಡ್‌ನ ಲಾಂಡ್ರಿಗೆ ಭೇಟಿ ನೀಡಿದರು. ಈ ವೇಳೆ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿದರು.
Advertisement
ಇದುವರೆಗೆ ಆರೋಪಿಗಳ ಬಗ್ಗೆ ಯಾವುದೇ ಸುಳಿವು ಲಭ್ಯವಾಗಿಲ್ಲ.ಆರೋಪಿಗಳ ಶೋಧಕ್ಕಾಗಿ ಆರು ತನಿಖಾ ತಂಡಗಳನ್ನು ರಚಿಸ ಲಾಗಿದೆ. ಈಗಾಗಲೇ 20 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರೂ ಮಹತ್ವದ ಸುಳಿವು ಲಭಿಸಿಲ್ಲ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ
ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೆಸ್ಸೆಸ್ ಕಾರ್ಯಕರ್ತ ಶರತ್ ಅವರ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ ಏನೂ ಆಗದೆ ಯಥಾ ಸ್ಥಿತಿಯಲ್ಲಿದೆ. ತಲೆ ಮತ್ತು ಕುತ್ತಿಗೆಯ ಭಾಗಕ್ಕೆ ತೀವ್ರ ಗಾಯಗೊಂಡಿರುವ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ
ತಾಲೂಕಿನಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.