Advertisement
ರಾಜ್ಯ ಸರಕಾರವು ಪ್ಲಾಸ್ಟಿಕ್ ನಿಷೇಧ ಅಧಿಸೂಚನೆ ಹೊರಡಿಸಿದ ಬಳಿಕ ಈ ಬಗ್ಗೆ ಪಾಲಿಕೆ ವ್ಯಾಪ್ತಿಯಲ್ಲಿಯೂ ಎಚ್ಚರ ವಹಿಸಲಾಗಿತ್ತು. ಕಳೆದ ವರ್ಷದಿಂದ ಪ್ಲಾಸ್ಟಿಕ್ ಮಾರಾಟದಲ್ಲಿ ತೊಡಗಿರುವ ಅಂಗಡಿಗಳಿಗೆ ದಾಳಿ ನಡೆಸಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಪ್ಲಾಸ್ಟಿಕ್ ಬಳಸುವ ಅಂಗಡಿಗಳ ಮೇಲೆ ನಿರಂತರ ದಾಳಿ ನಡೆದ ಅನಂತರ ಕೆಲವು ಅಂಗಡಿಗಳಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧಿಸಲಾಗಿತ್ತು. ಜತೆಗೆ ಪ್ಲಾಸ್ಟಿಕ್ ಉತ್ಪಾ ದ ನೆ ಮಾಡುವುದೂ ನಿಯಂತ್ರಣಕ್ಕೆ ಬಂದಿತ್ತು. ಆದರೆ ಕ್ರಮೇಣ ಈ ರೀತಿಯ ದಾಳಿ ಕಡಿಮೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಬಳಕೆ ನಿರಾತಂಕವಾಗಿ ಸಾಗುತ್ತಿದೆ. ಸಣ್ಣ ಪುಟ್ಟ ಅಂಗಡಿಗಳಲ್ಲಿ ಈಗಲೂ ಪ್ಲಾಸ್ಟಿಕ್ ಬಳಕೆ ಮುಂದುವರಿದಿದೆ. ಈಗ ಮತ್ತೆ ಪಾಲಿಕೆಯು ಎಚ್ಚೆತ್ತಿದ್ದು, ಪ್ಲಾಸ್ಟಿಕ್ ಮಾರಾಟ ಮಾಡುವವರ ಮೇಲೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
ಪ್ಲಾಸ್ಟಿಕ್ ನಿಷೇಧ ಸಂಬಂಧ ಅಂಗಡಿಗಳಿಗೆ ದಾಳಿ ಮಾಡುವುದು ಸಹಿ ತ ಸಂಪೂರ್ಣ ಪ್ರಕ್ರಿಯೆ ಆರೋಗ್ಯ ನಿರೀಕ್ಷಕರ ವ್ಯಾಪ್ತಿಗೆ ಬರುತ್ತದೆ. ಆದರೆ ಇಲ್ಲಿಯವರೆಗೆ ಪಾಲಿಕೆ ವ್ಯಾಪ್ತಿಯಲ್ಲಿದ್ದ ಆರೋಗ್ಯ ನಿರೀಕ್ಷಕರ ಸಂಖ್ಯೆ ಕೇವಲ ಐದು. ಇದರಿಂದ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ ಮಾಡಬೇಕೆಂಬ ತುಡಿತವಿದ್ದರೂ ನಿರಂತರ ದಾಳಿ ಸಾಧ್ಯವಾಗಿರಲಿಲ್ಲ. ಈಗ ಹೊಸದಾಗಿ ಆರೋಗ್ಯ ನಿರೀಕ್ಷಕರ ನೇಮಕಾತಿ ಆಗಿದ್ದು, ಈಗ ಸಂಖ್ಯೆ ಹದಿನಾಲ್ಕು ಆಗಿದೆ. ಹೀಗಾಗಿ ಪ್ಲಾಸ್ಟಿಕ್ ನಿಷೇಧಗೊಳಿಸುವ ಪ್ರಕ್ರಿಯೆಯೂ ವೇಗ ಪಡೆದಿದ್ದು, ಕೆಲವು ದಿನಗಳ ಹಿಂದೆ ಪಾಲಿಕೆ ಆಯುಕ್ತರು ಎಲ್ಲ ಆರೋಗ್ಯ ನಿರೀಕ್ಷಕರ ಸಭೆ ಕರೆದು, ಪ್ಲಾಸ್ಟಿಕ್ ಬಳಕೆ ಮಾಡುವ ಅಂಗಡಿಗಳಿಗೆ ದಾಳಿ ಮಾಡಿ ಪ್ಲಾಸ್ಟಿಕ್ ವಶ ಪಡಿಸಿಕೊಳ್ಳುವ ಸಂಬಂಧ ಗುರಿ ನಿಗದಿ ಮಾಡಿದ್ದಾರೆ. ಆದರೆ ಗುರಿ ನಿರ್ದಿಷ್ಟವಾಗಿ ಎಷ್ಟು ಎಂಬ ಬಗ್ಗೆ ಇನ್ನಷ್ಟೇ ನಿರ್ಧಾರವಾಗಬೇಕಿದೆ. ‘ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸದ್ಯ ಯಾವುದೇ ಕಾರ್ಯಾಚರಣೆ ನಡೆಯುತ್ತಿಲ್ಲ. ಚುನಾವಣೆ ಮುಗಿದ ತತ್‌ಕ್ಷಣ ಪ್ಲಾಸ್ಟಿಕ್ ವಿರುದ್ಧದ ಕಾರ್ಯಾಚರಣೆ ವೇಗ ಪಡೆಯಲಿದೆ’ ಎಂದು ಪರಿಸರ ಇಲಾಖೆಯ ಅಧಿಕಾರಿಯೋರ್ವರು ‘ಉದಯವಾಣಿ-ಸುದಿನ’ಕ್ಕೆ ತಿಳಿಸಿದ್ದಾರೆ.
Related Articles
ಆರೋಗ್ಯ ನಿರೀಕ್ಷಕರು ತಮಗೆ ಸಂಬಂಧಪಟ್ಟ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಬಳಕೆ ಮಾಡುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದ್ದಾರೆ. ಅಲ್ಲದೆ ಈಗಾಗಲೇ ವ್ಯಾಪಾರ ಪರವಾನಿಗೆ ನೀಡುವಾಗ ಪ್ಲಾಸ್ಟಿಕ್ ಬಳಸಬಾರದೆಂಬ ಸ್ಪಷ್ಟ ನಿಯಮ ಮತ್ತು ಎಚ್ಚರಿಕೆಯನ್ನೂ ನೀಡುವ ಕಾರ್ಯ ನಡೆಯುತ್ತಿದೆ.
Advertisement
ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಯೋರ್ವರು ಪ್ರತಿಕ್ರಿಯಿಸಿ, ‘ಪಾಲಿಕೆಯಿಂದ ಈಗಾಗಲೇ ಪ್ರಕರಣಹಸ್ತಾಂತರಿಸಿದ್ದಾರೆ. ಅವುಗಳನ್ನು ಪರಿಶೀಲಿಸಿ ಪ್ರಕರಣ ದಾಖಲಿಸಲು ಮುಖ್ಯ ಕಚೇರಿಗೆ ಅನುಮತಿ ಕೇಳಲಾಗಿದೆ’ ಎಂದು ತಿಳಿಸಿದ್ದಾರೆ. ದ್ವಿಚಕ್ರವಾಹನದಲ್ಲಿ ಮಾರಾಟ
ಪ್ರತಿ ರವಿವಾರ ನಗರದ ಸೆಂಟ್ರಲ್ ಮಾರ್ಕೆಟ್, ಪುರಭವನ ಮುಂಭಾಗದಲ್ಲಿ ಸಂತೆ ಇರುತ್ತದೆ. ಈ ವೇಳೆ ಕೆಲವರು ಸಂತೆಯಲ್ಲಿ ಮಾರಾಟನಿರತ ವ್ಯಾಪಾರಿಗಳಿಗೆ ದ್ವಿಚಕ್ರ ವಾಹನಗಳಲ್ಲಿ ಬಂದು ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಈ ಸಂಬಂಧ ಒಂದೆರಡು ರವಿವಾರಗಳಂದು ಖುದ್ದಾಗಿ ಪುರಭವನ ಬಳಿ ತೆರಳಿ ಗಮನಿಸಿದ್ದೇನೆ. ಒಂದು ವೇಳೆ ಸಾರ್ವಜನಿಕರು ಅಂತಹ ವಾಹನಗಳ ಬಗ್ಗೆ ಮಾಹಿತಿ ನೀಡಿದ್ದಲ್ಲಿ ವಾಹನ ವಶ ಪಡಿಸಿಕೊಂಡು ಪ್ರಕರಣ ದಾಖಲಿಸಲಾಗುವುದು ಎಂದು ಪಾಲಿಕೆ ಅಧಿಕಾರಿ ಹೇಳಿದ್ದಾರೆ. ವರ್ಷಕ್ಕೆ 1,460 ಟನ್ ಪಾಸ್ಲಿ ಕ್ ಬಳಕೆ
ಮಂಗಳೂರು ನಗರದಲ್ಲಿ ಮನೆ ಬಳಕೆಗಾಗಿಯೇ ಉಪಯೋಗಿಸಿದ ಪ್ಲಾಸ್ಟಿಕ್ ಪ್ರಮಾಣ ದಿನವೊಂದಕ್ಕೆ ಅಂದಾಜು ನಾಲ್ಕು ಟನ್‌ನಷ್ಟಿರುತ್ತದೆ. ಅಂದರೆ ವರ್ಷಕ್ಕೆ 1,460 ಟನ್ ಪ್ಲಾಸ್ಟಿಕ್ ನ್ನು ಬಳಕೆ ಮಾಡಲಾಗುತ್ತದೆ. ಪರಿಸರ, ವಾಯು ಮಾಲಿನ್ಯಕ್ಕೆ ಕಾರಣವಾಗುವುದಲ್ಲದೆ, ಜೀವ ಸಂಕುಲಕ್ಕೂ ಇದು ಮಾರಕವಾಗಿ ಪರಿಣಮಿಸುತ್ತಿದೆ. ಆದರೆ ಪ್ಲಾಸ್ಟಿಕ್ ಬಳಕೆ ನಿಷೇಧ ಎಷ್ಟರ ಮಟ್ಟಿಗೆ ಅನುಷ್ಠಾನವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಧನ್ಯಾ ಬಾಳೆಕಜೆ