Advertisement

Kanpur: ಹಳಿ ಮೇಲೆ ಎಲ್‌ಪಿಜಿ ಸಿಲಿಂಡರ್ ಇರಿಸಿ ರೈಲು ಸ್ಫೋಟಕ್ಕೆ ಯತ್ನ… ತಪ್ಪಿದ ಅನಾಹುತ

10:00 AM Sep 09, 2024 | Team Udayavani |

ಕಾನ್ಪುರ: ರೈಲು ಹಳಿಗಳ ಮೇಲೆ ಎಲ್‌ಪಿಜಿ ಸಿಲಿಂಡರ್ ಇಟ್ಟು ರೈಲು ಸ್ಫೋಟಿಸುವ ಯತ್ನ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement

ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿ ‘ಪ್ರಯಾಗರಾಜ್‌ನಿಂದ ಭಿವಾನಿ ಕಡೆಗೆ ಹೋಗುತ್ತಿದ್ದ ಕಾಳಿಂದಿ ಎಕ್ಸ್‌ಪ್ರೆಸ್ ಅನ್ನು ಗುರಿಯಾಗಿಸಿ ದುಷ್ಕರ್ಮಿಗಳ ತಂಡ ಇಲ್ಲಿನ ಶಿವರಾಜ್‌ಪುರ ಪ್ರದೇಶದ ಹಳಿಗಳ ಮೇಲೆ ಎಲ್‌ಪಿಜಿ ಸಿಲಿಂಡರ್ ಇಟ್ಟು ಹಳಿತಪ್ಪಿಸಲು ಯತ್ನಿಸಲಾಗಿದೆ ಆದರೆ ಅದೃಷ್ಟವಶಾತ್ ಯಾವುದೇ ರೈಲು ಎಲ್‌ಪಿಜಿ ಸಿಲಿಂಡರ್ ಗೆ ಡಿಕ್ಕಿ ಹೊಡೆದಿದ್ದು ಪರಿಣಾಮ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಹೇಳಿದ್ದಾರೆ.

ಅಲ್ಲದೆ ರೈಲ್ವೆ ಹಳಿಯಲ್ಲಿ ಎಲ್‌ಪಿಜಿ ಸಿಲಿಂಡರ್ ಮತ್ತು ಪೆಟ್ರೋಲ್ ಬಾಟಲಿಗಳು ಪತ್ತೆಯಾಗಿದ್ದು ಇದು ಸಾಮಾನ್ಯ ವಿಷಯವಲ್ಲ ಇದರ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಈ ಹಿಂದೆಯೂ ಉತ್ತರ ಪ್ರದೇಶದ ಹಲವೆಡೆ ರೈಲು ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟು ರೈಲು ಹಳಿ ತಪ್ಪಿಸುವ ಕೃತ್ಯ ಎಸೆಗಲಾಗಿತ್ತು ಎಂದು ಹೇಳಲಾಗಿದೆ.

ಭಾನುವಾರ ಬೆಳ್ಳಂಬೆಳಗ್ಗೆ ಹಳಿ ಮೇಲೆ ಇಟ್ಟ ಸಿಲಿಂಡರ್‌ಗೆ ರೈಲು ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಸಿಲಿಂಡರ್ ಹಳಿಯಿಂದ ದೂರ ಎಸೆಯಲ್ಪಟ್ಟಿದೆ ಹಾಗಾಗಿ ಸಂಭವನೀಯ ಅವಘಡ ತಪ್ಪಿದೆ ಎಂದು ಹೇಳಲಾಗಿದೆ.

ಘಟನೆ ಕುರಿತು ಮಾಹಿತಿ ಪಡೆದ ಕೂಡಲೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದು ಜೊತೆಗೆ ವಿಧಿವಿಜ್ಞಾನ ತಂಡವನ್ನು ಸಹ ಕರೆಸಲಾಗಿದೆ, ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ಕೂಡ ಈ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

Advertisement

ಎಲ್‌ಪಿಜಿ ಸಿಲಿಂಡರ್ ಹಳಿಗಳ ಮೇಲೆ ಇಟ್ಟಿರುವುದನ್ನು ಕಂಡ ಲೋಕೋ ಪೈಲಟ್ ತುರ್ತು ಬ್ರೇಕ್ ಹಾಕಿದ್ದಾರೆ ಆದರೂ ರೈಲು ಸಿಲಿಂಡರ್ ಗೆ ಡಿಕ್ಕಿ ಹೊಡೆದು ಸಿಲಿಂಡರ್ ದೂರ ಎಸೆಯಲ್ಪಟ್ಟಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಹರೀಶ್ ಚಂದ್ರ ಹೇಳಿದ್ದಾರೆ.

ಘಟನೆ ಸಂಬಂಧ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು ತಪ್ಪಿತಸ್ಥರನ್ನು ಆದಷ್ಟು ಬೇಗ ಪತ್ತೆ ಹಚ್ಚಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: Dilli Babu: ಸೂಪರ್‌ ಹಿಟ್‌ ಸಿನಿಮಾಗಳಿಗೆ ಬಂಡವಾಳ ಹಾಕಿದ್ದ ಖ್ಯಾತ ನಿರ್ಮಾಪಕ ಇನ್ನಿಲ್ಲ

Advertisement

Udayavani is now on Telegram. Click here to join our channel and stay updated with the latest news.

Next