Advertisement

ಕರಾವಳಿಯ ಸಹಕಾರಿ ವ್ಯವಸ್ಥೆಯನ್ನು ರಾಜ್ಯದೆಲ್ಲೆಡೆ ಅನುಸರಿಸಲು ಪ್ರಯತ್ನ : ಬೆಳ್ಳಿ ಪ್ರಕಾಶ್

08:32 PM Mar 21, 2021 | Team Udayavani |

ಕಾಪು: ಸಹಕಾರಿ ಕ್ಷೇತ್ರದ ಬೆಳವಣಿಗೆ ಮತ್ತು ಪ್ರಗತಿಯಲ್ಲಿ ಕರಾವಳಿಯ ಸಹಕಾರಿಗಳ ಸೇವೆ ಸ್ಮರಣೀಯವಾಗಿದೆ. ಸಹಕಾರಿಗಳು ಆರ್ಥಿಕ ರಂಗದಲ್ಲಿ ಸ್ವತಂತ್ರವಾಗಿ ವ್ಯವಹರಿಸುವ ಶಕ್ತಿಯನ್ನು ಮೈಗೂಡಿಸಿಕೊಂಡಿದ್ದು, ಸಹಕಾರಿ ಸಂಸ್ಥೆಗಳ ಮೂಲಕವಾಗಿ ಜನರು ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಇಲ್ಲಿ ಪುರುಷರ ಜೊತೆಗೆ ಮಹಿಳೆಯರೂ ಕೂಡಾ ಸಾಕಷ್ಟು ಮುಂದುವರಿದಿದ್ದು, ಕರಾವಳಿಯ ಸಹಕಾರಿ ರಂಗದ ಅಭಿವೃದ್ಧಿಯನ್ನು ಇಡೀ ರಾಜ್ಯಾದ್ಯಂತ ಪರಿಣಾಮಕಾರಿಯಾಗಿ ಅನುಸರಿಸಲು ಪ್ರಯತ್ನಿಸಲಾಗುವುದು ಎಂದು ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹಾಗೂ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಹೇಳಿದರು.

Advertisement

ಕಾಪು ಸಮೀಪದ ಮೂಳೂರಿನ ಸಾಯಿರಾಧಾ ಹೆರಿಟೇಜ್‌ನಲ್ಲಿ ಶನಿವಾರ ಅವಿಭಜಿತ ಜಿಲ್ಲೆಯ ಸಹಕಾರ ಕ್ಷೇತ್ರ ಸಮಗ್ರ ಅಧ್ಯಯನಕ್ಕೆ ಆಗಮಿಸಿದ ನಬಾರ್ಡ್ ನಿಯೋಜಿತ ಅಧ್ಯಯನ ತಂಡದ ಸದಸ್ಯರು ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್‌ನ ಸದಸ್ಯರೊಂದಿಗೆ ಹಮ್ಮಿಕೊಂಡ ಸಂವಾದ ಕಾರ್ಯಕ್ರಮ, ನವೋದಯ ಸ್ವಸಹಾಯ ಗುಂಪುಗಳ ಸದಸ್ಯರ ಆಹಾರ ಮಳಿಗೆ, ಗೃಹೋಪಯೋಗಿ ವಸ್ತು ಪ್ರದರ್ಶನ, ಸಾಂಸ್ಕೃತಿಕ ಸಂಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರು ಆರ್ಥಿಕವಾಗಿ ಸದೃಢಗೊಳ್ಳದಿದ್ದರೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸತ್ತಾರೆ. ಸ್ವಸಹಾಯ ಸಂಘಗಳು ರಚನೆಯಾದ ಬಳಿಕ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕುವಂತಾಗಿದೆ. ಸ್ವಸಹಾಯ ಸಂಘಗಳ ರಚನೆಯ ಮೂಲಕ ಮಹಿಳೆಯರು ಆರ್ಥಿಕ ರಂಗದಲ್ಲಿ ಸ್ವತಂತ್ರರಾಗಿ ವ್ಯವಹರಿಸುವ ಶಕ್ತಿಯನ್ನು ಮೈಗೂಡಿಸಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಎಸ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಅವರ ಶ್ರಮ ಶ್ಲಾಘನೀಯವಾಗಿದ್ದು, ಸಹಕಾರಿ ರಂಗದಲ್ಲಿ ಅವರು ಹೊಸ ಕ್ರಾಂತಿಯನ್ನುಂಟು ಮಾಡಿದ್ದಾರೆ ಎಂದರು.

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಮಾತನಾಡಿ, 1994 ರಲ್ಲಿ ಸಹಕಾರಿ ಸಂಸ್ಥೆಗಳು ನಷ್ಟದಲ್ಲಿದ್ದವು. ಸಹಕಾರಿ ಸಂಸ್ಥೆಗಳು ಲಾಭದಲ್ಲಿ ಇರಬೇಕು ಎನ್ನುವ ನಿಟ್ಟಿನಲ್ಲಿ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮೂಲಕ ಹೊಸ ಪ್ರಯತ್ನಗಳೊಂದಿಗೆ ಸಹಕಾರಿ ಕ್ರಾಂತಿಯನ್ನು ಉಂಟು ಮಾಡಿದ್ದು, ಸಹಕಾರಿ ಕ್ಷೇತ್ರದಲ್ಲಿ ಪೈಪೋಟಿ ಇದ್ದಾಗ ಮಾತ್ರ ಬೆಳೆಯಲು ಸಾಧ್ಯವಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಹಕಾರಿ ಸಂಸ್ಥೆಯಲ್ಲಿ ಗ್ರಾಹಕರಿಗೆ ಹೆಚ್ಚು ಹೆಚ್ಚು ಡಿವಿಡೆಂಡ್ ನೀಡುತ್ತಾ ಬಂದ ಕಾರಣ ಇಂದು ಎಲ್ಲಾ ಸಹಕಾರಿ ಸಂಸ್ಥೆಗಳು ಪ್ರಗತಿಯನ್ನು ಸಾಧಿಸುವಂತಾಗಿದೆ ಎಂದರು.

ನಿಯೋಗದಲ್ಲಿ ಜೊತೆಗಿದ್ದವರು : ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್ ನೇತೃತ್ವದಲ್ಲಿ ಕರಾವಳಿಗೆ ಆಗಮಿಸಿದ ನಬಾರ್ಡ್ ನಿಯೋಜಿತ ಅಧ್ಯಯನ ತಂಡದಲ್ಲಿ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಜಿ. ಡಿ. ಹರೀಶ್, ಬಾಗಲಕೋಟೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯ ಕುಮಾರ್ ಸರನಾಯಕ್, ಕಲಬುರಗಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜ್‌ಕುಮಾರ್ ಪಾಟೀಲ್, ಮಂಡ್ಯ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ. ಅಶ್ವಥ್, ಬೆಂಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ. ಹನುಮಂತಯ್ಯ, ದಾವಣಗೆರೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಗದೀಶಪ್ಪ ಬಣಕಾರ್, ಧಾರವಾಡ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಲಿಂಗರಾಜು ಎಸ್. ಚಪ್ಪರದಳ್ಳಿ, ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚೆನ್ನವೀರಪ್ಪ, ಅಪೆಕ್ಸ್ ಬ್ಯಾಂಕ್ ಮುಖ್ಯ ಕಾರ್ಯ ನಿರ್ವಹಣಾಽಕಾರಿ ಸಿ. ಎನ್. ದೇವರಾಜ್ ಮೊದಲಾದವರು ಜೊತೆಗಿದ್ದರು.

Advertisement

ಕರ್ನಾಟಕ ಹಾಲು ಮಹಾಮಂಡಲದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ವಾದಿರಾಜ ಶೆಟ್ಟಿ, ಶಶಿಕುಮಾರ್ ರೈ, ರಾಜು ಪೂಜಾರಿ, ರಾಜೇಶ್ ರಾವ್ ಪಾಂಗಾಳ, ಮಹೇಶ್ ಹೆಗಡೆ, ಅಶೋಕ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಽಕಾರಿ ರವೀಂದ್ರ ಬಿ., ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ವಿವಿಧ ಸಹಕಾರ ಸಂಘಗಳ ಅಧ್ಯಕ್ಷರುಗಳು ಮತ್ತು ನಿರ್ದೇಶಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕ / ಬೆಳಪು ಸಿ.ಎ. ಬ್ಯಾಂಕ್ ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ಸ್ವಾಗತಿಸಿ, ವಂದಿಸಿದರು. ವಾಲ್ಸ ನ್ ಡೇಸಾ ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next