ಉಡುಪಿ: ಕಾಲೇಜಿನ ಶೌಚಾಲಯದಲ್ಲಿ ನಡೆದ ವೀಡಿಯೋ ಪ್ರಕರಣವನ್ನು ಮುಚ್ಚಿ ಹಾಕಲು ಆ ಕಾಲೇಜಿನ ಆಡಳಿತಾಧಿಕಾರಿ ಪ್ರಯತ್ನಿಸಿದ್ದಾರೆ. ಅದರ ವಿರುದ್ಧ ಧ್ವನಿ ಎತ್ತಿದ ವಿದ್ಯಾರ್ಥಿನಿಯರ ಅಂಕಪಟ್ಟಿಯನ್ನು ತೆಗೆದಿಟ್ಟುಕೊಂಡು ಈ ವಿಚಾರದ ಬಗ್ಗೆ ಧ್ವನಿ ಎತ್ತದಂತೆ ಬೆದರಿಸಿ¨ªಾರೆ ಎಂದು ಶಾಸಕ ಯಶ್‌ಪಾಲ್ ಸುವರ್ಣ ಆರೋಪಿಸಿದ್ದಾರೆ.
ಬುಧವಾರ ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತ ನಾಡಿದ ಅವರು, ಪ್ರಕರಣದ ಬಗ್ಗೆ ಪ್ರತಿಭಟಿಸಿದ ವಿದ್ಯಾರ್ಥಿನಿಯರಿಗೆ, “ಠಾಣೆಯಲ್ಲಿ ದೂರು ದಾಖಲಾದರೆ ಎಲ್ಲಿಯೂ ನಿಮಗೆ ಕೆಲಸ ಸಿಗುವುದಿಲ್ಲ, ಹೊರದೇಶಗಳಿಗೆ ತೆರಳಲು ಸಾಧ್ಯವಿಲ್ಲ” ಎಂದು ಬೆದರಿಸುವ ಮೂಲಕ ಬಾಯಿ ಮುಚ್ಚಿಸಲು ಯತ್ನಿಸಿದ್ದಾರೆ. ಕಾಲೇಜಿನಲ್ಲಿ ಈ ಹಿಂದೆಯೂ ಇಂತಹ ಘಟನೆಗಳು ನಡೆದಿವೆ ಎಂದು ನೊಂದ ವಿದ್ಯಾರ್ಥಿನಿಯರು ನಮ್ಮ ಬಳಿ ನೋವು ಹಂಚಿಕೊಂಡಿದ್ದಾರೆ ಎಂದರು.
ಆರೋಪ ಹೊತ್ತಿರುವ ಮೂವರು ವಿದ್ಯಾರ್ಥಿನಿಯರ ಸಂಬಂಧಿಗಳು ಪಿಎಫ್ಐನಲ್ಲಿ ಸಕ್ರಿಯರಾಗಿದ್ದರು ಎಂಬ ಮಾಹಿತಿ ದೊರೆತಿದೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಯವರ ಗಮನಕ್ಕೆ ತರಲಾಗಿದ್ದು, ತನಿಖೆ ಮಾಡುವಂತೆ ಆಗ್ರಹಿಸಿದ್ದೇವೆ ಎಂದರು.
ಡಿವೈಎಸ್ಪಿ ಬೆಳ್ಳಿಯಪ್ಪ ಅವರನ್ನು ನೂತನ ತನಿಖಾಧಿಕಾರಿಯನ್ನಾಗಿ ಮಾಡಲಾಗಿದ್ದು, ಅವರ ಮೇಲೆ ವಿಶ್ವಾಸ ಇದೆ. ನೊಂದ ವಿದ್ಯಾರ್ಥಿನಿಯರಿಗೆ ನ್ಯಾಯ ದೊರಕಿಸಿ ಕೊಡುತ್ತಾರೆ ಎಂಬ ನಂಬಿಕೆ ನಮ್ಮದು. ಈಗಾಗಲೇ ನಮ್ಮ ಬಳಿಯಿರುವ ದಾಖಲೆಗಳನ್ನು ಅವರಿಗೆ ನೀಡಿದ್ದೇವೆ. ಮುಂದೆಯೂ ಪ್ರಕರಣದ ಕುರಿತ ದಾಖಲೆಗಳು ದೊರಕಿದರೆ ನೀಡುತ್ತೇವೆ. ಈಗಾಗಲೇ ಪೊಲೀಸರು ಎಫ್ಐಆರ್ ಅನ್ನು ತಡವಾಗಿ ದಾಖಲಿಸಿದ್ದಾರೆ. ಪ್ರಕರಣ ದಲ್ಲಿ ಸರಕಾರ
ಹಸ್ತಕ್ಷೇಪ ಮಾಡದೇ ನಿಷ್ಪಕ್ಷ ತನಿಖೆ ನಡೆಸಲು ಪೊಲೀಸರಿಗೆ ಅವಕಾಶ ನೀಡಬೇಕು ಎಂದರು.
ರಾಜ್ಯಪಾಲರಿಗೆ ಮನವಿ
ಜಿಲ್ಲೆಯ ಐವರು ಶಾಸಕರು ಆ. 4ರಂದು ರಾಜ್ಯಪಾಲರನ್ನು ಭೇಟಿ ಮಾಡಿ ಪ್ರಕರಣದ ಗಂಭೀರತೆಯನ್ನು ಅವರ ಗಮನಕ್ಕೆ ತಂದು ಎಸ್‌ಐಟಿ ತನಿಖೆಗೆ ವಹಿಸಬೇಕೆಂದು ಮನವಿ ಸಲ್ಲಿಸುತ್ತೇವೆ ಎಂದು ಯಶ್‌ಪಾಲ್ ಸುವರ್ಣ ತಿಳಿಸಿದರು.