Advertisement

ಗಾಣಿಗ ಸಮುದಾಯ ಭವನಕ್ಕೆ ಅನುದಾನ ಕೊಡಿಸಲು ಯತ್ನ

12:34 PM Dec 25, 2017 | Team Udayavani |

ಬೆಂಗಳೂರು: ಬೆಂಗಳೂರಿನ ಸೋಮಕ್ಷತ್ರಿಯ ಗಾಣಿಗ ಸಮಾಜದ ಉದ್ದೇಶಿತ ಸಮುದಾಯ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಕೊಡಿಸಲು ಪ್ರಯತ್ನಿಸುವುದಾಗಿ ಕ್ರೀಡಾ ಸಚಿವ ಪ್ರಮೋದ್‌ ಮಧ್ವರಾಜ್‌ ಭರವಸೆ ನೀಡಿದರು.

Advertisement

ವಿಜಯನಗರದ ಬಂಟರ ಸಂಘದಲ್ಲಿ ಭಾನುವಾರ ನಡೆದ ಸೋಮಕ್ಷತ್ರೀಯ ಗಾಣಿಗ ಸಮಾಜದ 20ನೇ ವರ್ಷದ ಪ್ರತಿಭಾ ಸಂಭ್ರಮ ಹಾಗೂ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಡಿಎ ವತಿಯಿಂದ ಮಂಜೂರಾಗಿರುವ ನಿವೇಶನದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಕೊಡಿಸುವ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಲಾಗುವುದು.

ಸೋಮಕ್ಷತ್ರಿಯ ಗಾಣಿಗ ಸಮುದಾಯದ ಜನ ವಿವಿಧ ಕ್ಷೇತ್ರಗಳಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವುದು ಸಂತಸದ ವಿಚಾರವಾಗಿದೆ. ಅದೇ ರೀತಿ ಇಡೀ ಸಮಾಜ ಒಗ್ಗಟ್ಟು ಕಾಪಾಡಿಕೊಂಡು ಅಭಿವೃದ್ಧಿ ಸಾಧಿಸಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಆಜ್ರಿ ಮಂಜುನಾಥ ಗಾಣಿಗ ಅವರಿಗೆ ಹಾರಾಡಿ ರಾಮ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಅಲ್ಲದೆ ಸ್ಕೌಟ್ಸ್‌ನಲ್ಲಿ ರಾಜ್ಯಪಾಲ ಪ್ರಶಸ್ತಿ ಪುರಸ್ಕೃತ ಕೊಗ್ಗ ಗಾಣಿಗ, ಉದ್ಯಮಿ ನಾಗೇಶ್‌ ಮಾರಾಳಿ, ರಾಷ್ಟ್ರೀಯ ಕ್ರೀಡಾಪಟು ಪ್ರಜ್ಞಾ ಎಸ್‌. ಪ್ರಕಾಶ್‌ ಸುವರ್ಣ ನ್ಯೂಸ್‌ನ ರಾಜಕೀಯ ವಿಭಾಗದ ಮುಖ್ಯಸ್ಥ ವೀರೇಂದ್ರ ಉಪೇಂದ್ರ, ಚಿತ್ರನಟಿ ಅಮೃತಾ ರಾವ್‌, ಕಲಾವಿದೆ ಶಬರಿ ಗಾಣಿಗ, ಗೃಹ ಉದ್ಯಮಿ ಪಾರ್ವತಿ ಪ್ರಭಾಕರ್‌ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮುದಾಯದ ಹಲವರನ್ನು ಸನ್ಮಾನಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next