Advertisement

Madikeri ಮಾದಕ ದ್ರವ್ಯ ಮಾರಾಟಕ್ಕೆ ಯತ್ನ: ಇಬ್ಬರ ಸೆರೆ‌

12:11 AM Jul 11, 2023 | Team Udayavani |

ಮಡಿಕೇರಿ: ಮಡಿಕೇರಿ ಗ್ರಾಮಾಂತರ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿ, 241.4 ಗ್ರಾಂ. ಗಾಂಜಾವನ್ನು ವಶಪಡಿಸಿ ಕೊಂಡಿದ್ದಾರೆ.

Advertisement

ಪಂಚವಳ್ಳಿ ನಿವಾಸಿಗಳಾದ ಸದ್ದಾಂ ಹುಸೇನ್‌ (35) ಹಾಗೂ ಜಾಬಿಯ ಉಲ್ಲಾಖಾನ್‌ (40) ಬಂಧಿತರು. ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಮಾಲು ಸಹಿತ ವಶಕ್ಕೆ ಪಡೆದಿದ್ದಾರೆ.

ಮಾಹಿತಿ ನೀಡಿ
ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಠಾಣೆ ಹಾಗೂ ಕೆಎಸ್‌ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಹಾಗೂ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರುತ್ತೇವೆ. ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಎಸ್‌ಪಿ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next