Advertisement

ಸರಕಾರಿ ಆಸ್ಪತ್ರೆ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ

03:00 PM Dec 19, 2017 | Team Udayavani |

ರಾಣಿಬೆನ್ನೂರ: ಸರ್ಕಾರಿ ಆಸ್ಪತ್ರೆಗಳಿರುವುದೇ ಬಡವರ ಸೇವೆಗಾಗಿ. ಇಲ್ಲಿನ ವೈದ್ಯರು ಜನಸಾಮಾನ್ಯರ ರೋಗಗಳಿಗೆ  ಸೂಕ್ತ ಚಿಕಿತ್ಸೆ ನೀಡಿ ರೋಗಿಗಳ ಪ್ರೀತಿ ವಿಶ್ವಾಸ ಗಳಿಸಬೇಕು. ಅಂದಾಗ ಮಾತ್ರ ಆಸ್ಪತ್ರೆಗೆ ಹೆಸರು ಉಳಿಯಲು ಸಾಧ್ಯ ಎಂದು ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಹೇಳಿದರು.

Advertisement

ನಗರದ ಸಾರ್ವಜನಿಕ ಆಸ್ಪತ್ರೆ ಸಭಾಭವನದಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವೈದ್ಯರ ಕೊರತೆ ಕೇವಲ ಇಲ್ಲಿನ ಸಮಸ್ಯೆಯಲ್ಲ. ಇದು ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳು ಎದುರಿಸುತ್ತಿರುವ ಬಹುದೊಡ್ಡ ಸಮಸ್ಯೆಗಳಾಗಿವೆ. ಹಣ ಕೊಡುತ್ತೇವೆಂದರೂ ವೈದ್ಯರು ಬರಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಜನಸಾಮಾನ್ಯರೂ ಸರ್ಕಾರಿ ಆಸ್ಪತ್ರೆಗೆ ಬರಲು ಸೂಕ್ತ ವ್ಯವಸ್ಥೆ ಇಲ್ಲವೆಂಬ ಕಾರಣಒಡ್ಡಿ ಹಿಂದೇಟು ಹಾಕುವಂತಾಗಿದೆ ಎಂದರು.

ಸಮಿತಿಗೆ ನೇಮಕಗೊಂಡ ನೂತನ ಸದಸ್ಯರು ಇಲ್ಲಿನ ಮೂಲ ಸಮಸ್ಯೆಗಳ ಕಡೆಗೆ ಗಮನಹರಿಸಬೇಕು.  ಆಡಳಿತದೊಂದಿಗೆ ಪರಸ್ಪರ ಸಮಾಲೋಚನೆ ನಡೆಸುವುದರ ಮೂಲಕ ಅದರ ಪರಿಹಾರಕ್ಕೆ ಶ್ರಮಿಸಬೇಕು. ಸಾರ್ವಜನಿಕರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ನಾಗರಿಕರು ಇದರಲ್ಲಿ ಪಾಲ್ಗೊಳ್ಳಬೇಕಾದ ಅಗತ್ಯವಿದೆ. ಯಾವುದೇ ಮಡಿವಂತಿಕೆ ಇದರಲ್ಲಿ ತೋರಿಸುವ ಅವಶ್ಯಕತೆ ಇಲ್ಲ
ಎಂದರು. 

ತಾಪಂ ಅಧ್ಯಕ್ಷ ನೀಲಕಂಠಪ್ಪ ಕುಸಗೂರ, ಉಪಾಧ್ಯಕ್ಷೆ ಚೈತ್ರಾ ಮಾಗನೂರ, ತಹಶೀಲ್ದಾರ ಬಿ. ರಾಮಮೂರ್ತಿ, ತಾಲೂಕು ವೈದ್ಯಾಧಿಕಾರಿ ಡಾ| ರಾಜು ಶಿರೂರ, ಆಡಳಿತ ವೈದ್ಯಾಧಿಕಾರಿ ಡಾ| ಆರ್‌.ಸಿ. ಪರಮೇಶ್ವರಪ್ಪ, ಡಾ| ಎಸ್‌. ಎಸ್‌. ಗಡಾದ, ಶೇರುಖಾನ ಕಾಬೂಲಿ, ಕೃಷ್ಣಪ್ಪ ಕಂಬಳಿ, ಶಿವಾನಂದ ಕನ್ನಪ್ಪಳವರ, ಬಸವರಾಜ ಹುಚಗೊಂಡರ, ಸುರೇಶ ಜಾಡಮಲಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next