Advertisement
ಚಾಮರಾಜನಗರದಿಂದ ಮೈಸೂರಿಗೆ ಬರುತ್ತಿದ್ದ ಎಕ್ಸ್ ಪ್ರೆಸ್ ರೈಲು ಗಾಡಿ ಸಂ. 06275 ರ ಲೋಕೋ ಪೈಲಟ್ (ಚಾಲಕ) ನಂಜನಗೂಡು ಮತ್ತು ಕಡಕೊಳ ರೈಲ್ವೆ ನಿಲ್ದಾಣಗಳ ನಡುವಿನ ರೈಲ್ವೆ ಹಳಿಯಲ್ಲಿ ಸಂಭಾವ್ಯ ಅನಾಹುತವನ್ನು ತಪ್ಪಿಸಿ ಅತ್ಯಂತ ಜಾಗರೂಕವಾದ ಶ್ಲಾಘನೀಯವಾದ ಕಾರ್ಯ ಮಾಡಿದ್ದಾರೆ. ರೈಲ್ವೆ ಎಂಜಿನ್ ನ ಚಾಲಕನ ತ್ವರಿತ ಪ್ರತಿಕ್ರಿಯೆಯ ಕಾರಣವಾಗಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕಾಪಾಡಲಾಗಿದ್ದು ರೈಲನ್ನು ಧ್ವಂಸಗೊಳಿಸುವ ದುರುದ್ದೇಶಪೂರಿತ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ.
Related Articles
Advertisement
ವಿಧ್ವಂಸಕ ಕೃತ್ಯದ ಯತ್ನವನ್ನು ಒಪ್ಪಿಕೊಂಡಿದ್ದಾನೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ಮೈಸೂರಿನ ರೈಲ್ವೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಆರೋಪಿಗಳವಿರುದ್ದ ರೈಲ್ವೆ ಕಾಯಿದೆ-1989ರ ಅನ್ವಯ Cr.No.39/2023 U/s 150(1)(A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ಕುರಿತಂತೆ ತನಿಖೆಯು ನಡೆಯುತ್ತಿದ್ದು ಜೀವಾವಧಿವರೆಗಿನ ಶಿಕ್ಷೆಗೆ ಗುರಿಯಾಗಬಹುದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಕಾರಣಕ್ಕಾಗಿ ರೈಲು ಸಂಖ್ಯೆ 06275ರ ಸಂಚಾರವನ್ನು ತಡೆಹಿಡಿದಿದ್ದ ಹಿನ್ನೆಲೆಯಲ್ಲಿ ಆ ಮಾರ್ಗದ ರೈಲುಗಳ ಸಂಚಾರದಲ್ಲಿ ಕೆಲ ನಿಮಿಷಗಳ ಕಾಲ ವ್ಯತ್ಯಯ ಉಂಟಾಗಿತ್ತು. ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಶಿಲ್ಪಿ ಅಗರ್ವಾಲ್ ರವರು ರೈಲಿನ ಚಾಲಕನ ಸಮಯೋಚಿತ ಕ್ರಮ ಮತ್ತು ಭದ್ರತಾ ಪಡೆಗಳ ತ್ವರಿತ ಪ್ರತಿಕ್ರಿಯೆ ಶ್ಲಾಘಿಸಿ, ಪ್ರಯಾಣಿಕರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ವಿಚಾರಿಸಿಕೊಂಡು ಕೃತಜ್ಞತೆ ಸಲ್ಲಿಸಿದರು. ಹಳಿಗಳ ಮೇಲೆ ಇಂತಹ ಕೃತ್ಯದಲ್ಲಿ ತೊಡಗಿ ಪ್ರಯಾಣಿಕರಿಗೆ ದೊಡ್ಡ ಆಪತ್ತು ತರುವ ಮತ್ತು ಜೀವಹಾನಿ ಉಂಟುಮಾಡುವ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಂತಹ ಚಟುವಟಿಕೆಗಳಲ್ಲಿ ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದರೆ ಅವರ ವಿರುದ್ಧ ರೈಲ್ವೆ ಆಡಳಿತವು ಅತ್ಯಂತ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.