Advertisement
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 25 ಸಾವಿರ ಮಕ್ಕಳ ಕಾಣೆಯಾಗಿದ್ದು ಮಹಿಳೆಯರ ನಾಪತ್ತೆಯಿಂದ ಲವ್ ಜಿಹಾದ್ ಉದ್ದೇಶದ ಆತಂಕ ಇದ್ದು ಈ ಬಗ್ಗೆ ವಿಶೇಷ ಗಮನ ಹರಿಸಬೇಕಾಗಿದೆ ಎಂದು ನುಡಿದರು.
Related Articles
Advertisement
ಮಹಿಳೆಯರ ಮೇಲೆ ದೌರ್ಜನ್ಯ ಲವ್ ಜಿಹಾದ್, ಕಿಡ್ನಾಪ್, ನಾಪತ್ತೆಯಂತಹ ಪ್ರಕರಣಗಳ ಬಗ್ಗೆ ಸಂಘಟಿತ ಹೋರಾಟದ ಅಗತ್ಯವಿದ್ದು ಈ ಬಗ್ಗೆ ನಾನೇ ಖುದ್ದಾಗಿ ಹಿಂದೂಪರ ಸಂಘಟನೆಗಳೆಲ್ಲವನ್ನು ಭೇಟಿಯಾಗಿ ಹೋರಾಟಕ್ಕೆ ಕೈಜೋಡಿಸುವಂತೆ ಮನವಿ ಮಾಡುತ್ತೇನೆ. ಧರ್ಮ, ಜಾತಿ ರಹಿತ ಹೋರಾಟ ಆಗಬೇಕಾಗಿದೆ ಎಂದರು.
ಲವ್ ಜಿಹಾದ್ ಕೇವಲ ಒಂದು ರಾಜ್ಯ ಒಂದು ಪ್ರದೇಶಕ್ಕೆ ಸೀಮಿತವಾಗಿಲ್ಲ ರಾಷ್ಟ್ರಾದ್ಯಂತ ಆವರಿಸಿದ್ದು ಇದನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಕಠಿಣ ಕಾನೂನು ರಚನೆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶ ಹೊರತುಪಡಿಸಿ ಉಳಿದೆಲ್ಲ ರಾಜ್ಯ ಸರ್ಕಾರಗಳು ವಿಫಲವಾಗಿವೆ. ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ ಎಂದರು.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯ ಪ್ರತಿಸ್ಥಾಪನೆಯನ್ನು ಈ ವರ್ಷವೂ ಮಾಡುತ್ತೇವೆ ಅದನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಹುಬ್ಬಳ್ಳಿಯ ಈದ್ಗಾ ಮೈದಾನ ಪಾಕಿಸ್ತಾನ ಇಲ್ಲವೇ ಆಫ್ಘಾನಿಸ್ತಾನದಲ್ಲಿ ಇಲ್ಲ ಅದು ಭಾರತದಲ್ಲಿಯೇ ಇದೆ. ನಮ್ಮದೇ ನೆಲದಲ್ಲಿ ನಮ್ಮ ದೇವರ ಪ್ರತಿಷ್ಠಾಪನೆಗೆ ಅವಕಾಶ ನೀಡುವುದಿಲ್ಲ ಎಂದರೆ ಸಹಿಸಿಕೊಳ್ಳುವುದಾದರೂ ಹೇಗೆ ಎಂದು ಪ್ರಶ್ನಿಸಿದರು.
ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಕಾಂಗ್ರೆಸ್ ಸರ್ಕಾರವಿರಲಿ, ಮುಸ್ಲಿಮರೇ ಆಗಲಿ ಯಾರು ಸಹ ವಿರೋಧ ಮಾಡದೆ ಸಹಕಾರ ನೀಡಬೇಕು. ಅದೇ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿಲ್ಲವೇ ಹಾಗಿದ್ದರೆ ಗಣೇಶ ಮೂರ್ತಿಯ ಪ್ರತಿಷ್ಠಾಪನೆಗೆ ಯಾಕೆ ವಿರೋಧ ಎಂದು ಪ್ರಶ್ನಿಸಿದರು.
ಶ್ರೀರಾಮ ಸೇನೆ ರಾಜ್ಯ ಅಧ್ಯಕ್ಷ ಗಂಗಾಧರ ಪಾಟೀಲ್ ಕುಲಕರ್ಣಿ ಸೇರಿದಂತೆ ಹಲವರು ಇದ್ದರು