ಗದಗ: ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಡಿಯಲ್ಲಿ ಒಟ್ಟು 46 ಜಾತಿ ಸಮುದಾಯಗ ಳಿದ್ದು, ಎಲ್ಲ ಜನ ಸಮುದಾಯಗಳಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದಾಗಿ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಹೇಳಿದರು.
ಜಿಲ್ಲಾಡಳಿತ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಲೆಮಾರಿ ಸಮುದಾಯವು ಮೂಲಭೂತ ಸೌಕರ್ಯಗಳಿಂದವಂಚಿತವಾಗಿದ್ದು, ನಿಗಮದಿಂದ ಸಮುದಾಯದಆರ್ಥಿಕ ಸಬಲತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.ಇತರೆ ಸಮಾಜಗಳಂತೆ ಗೌರವಯುತ ಜೀವನನಡೆಸಲು ಎಲ್ಲ ಅವಕಾಶಗಳನ್ನು ಕಲ್ಪಿಸಲಾಗುತ್ತದೆ ಎಂದು ತಿಳಿಸಿದರು.
ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವುದರಮೂಲಕ ಸಮುದಾಯದ ಪ್ರಗತಿಗೆ ಶ್ರಮಿಸಲಾಗುತ್ತದೆ. ಜಿಲ್ಲೆಯಲ್ಲಿ ಅಂದಾಜು 47 ಸಾವಿರ ಅಲೆಮಾರಿ, ಅರೆ ಅಲೆಮಾರಿ ಜನಾಂಗ ವಾಸವಿದ್ದು, ಅವರಿಗೆ ನಿವೇಶನ ಸೇರಿದಂತೆಸಾಲ ಸೌಲಭ್ಯಗಳನ್ನು ದೊರಕಿಸಿಕೊಡಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ತಾವು ನಿಗಮದ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದ ಬಳಿಕ 11 ಜಿಲ್ಲೆಗಳಲ್ಲಿ ಪ್ರವಾಸಕೈಗೊಂಡಿದ್ದು, ಆಯಾ ಜಿಲ್ಲೆಯ ಅಲೆಮಾರಿ ಜನಾಂಗದ ಸ್ಥಿತಿಗತಿ, ಆಚಾರ ವಿಚಾರಗಳನ್ನುಅರಿಯುವುದರೊಂದಿಗೆ ಸಮಗ್ರ ವರದಿತಯಾರಿಸಿ, ಮುಖ್ಯಮಂತ್ರಿಗಳಿಗೆ ಸಲ್ಲಿಸಲುಉದ್ದೇಶಿಸಲಾಗಿದೆ. ಈ ಮೂಲಕ ಅಲೆಮಾರಿಸಮುದಾಯಕ್ಕೆ ಪ್ರತಿ ಜಿಲ್ಲೆಗೊಂದು ಸಭಾಭವನ ನಿರ್ಮಿಸಬೇಕು. ಅದಕ್ಕೆ ಅಗತ್ಯವಿರುವ ಅನುದಾನ ಕ್ರೋಢೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ, ಅಲೆಮಾರಿ, ಅರೆ ಅಲೆಮಾರಿ ಜನಾಂಗಕ್ಕೆ ಪ್ರತ್ಯೇಕ ಸ್ಮಶಾನ ನಿಮಾರ್ಣಕ್ಕೆ ಕ್ರಮ ವಹಿಸಲಾಗುತ್ತದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಕಾಂತಿಲಾಲ ಬನ್ಸಾಲಿ, ಜಿಲ್ಲಾ ಗೊಲ್ಲ ಸಮಾಜದ ಅಧ್ಯಕ್ಷ ಹರೀಶ ಪೂಜಾರ, ಗೊಂದಳಿಸಮಾಜದ ಮುಖಂಡ ವಿಠಲ ಗಣಾಚಾರಿ,ಸಮಾಜದ ಮುಖಂಡರಾದ ಶಂಕರ ಹೆಬ್ಬಳ್ಳಿ,ನಿಗಮದ ಜಿಲ್ಲಾ ವ್ಯವಸ್ಥಾಪಕಿ ಪ್ರಿಯದರ್ಶಿನಿ ಮುಂತಾದವರು ಉಪಸ್ಥಿತರಿದ್ದರು.