Advertisement

Goa ಕೋಮು ಸೌಹಾರ್ದತೆ ಕದಡುವ ಪ್ರಯತ್ನಗಳು ಚಾಲ್ತಿಯಲ್ಲಿವೆ: ಸಿಎಂ ಸಾವಂತ್

08:20 PM Oct 02, 2023 | Team Udayavani |

ಪಣಜಿ: ಗೋವಾದಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ ಕೆಲವು ಪ್ರಜ್ಞಾಪೂರ್ವಕ ಪ್ರಯತ್ನಗಳು ನಡೆಯುತ್ತಿವೆ ಆದರೆ ರಾಜ್ಯ ಸರಕಾರವು ಅಂತಹವುಗಳ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿರುವ ಕಾರಣ ಜನರು ನಂಬಿಕೆ ಇರಿಸಬೇಕು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೋಮವಾರ ಹೇಳಿದ್ದಾರೆ.

Advertisement

ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದಂದು ಪುಷ್ಪ ನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಒಡೆದು ಹಾಕಿದ, ಚರ್ಚ್ ಪಾದ್ರಿಯೊಬ್ಬರು ಹಿಂದೂ ವಿರೋಧಿ ಹೇಳಿಕೆಗಳನ್ನು ನೀಡಿರುವುದು, ಯಾರೋ ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಉದಾಹರಣೆಗಳನ್ನು ಉಲ್ಲೇಖಿಸಿ ಮಾತನಾಡಿದರು.

“ಗೋವಾ ಶತಮಾನಗಳಿಂದ ಕೋಮು ಸೌಹಾರ್ದತೆಯನ್ನು ಕಾಪಾಡಿಕೊಂಡು ಬಂದಿದೆ. ಆದರೆ ಅದನ್ನು ಹಾಳು ಮಾಡಲು ಕೆಲವರು ಯತ್ನಿಸುತ್ತಿದ್ದಾರೆ. ಇಂತಹ ನಿದರ್ಶನಗಳಿಂದ ಜನರು ವಿಚಲಿತರಾಗುತ್ತಾರೆ ಮತ್ತು ಪೊಲೀಸ್ ಠಾಣೆಗಳ ಹೊರಗೆ ಪ್ರತಿಭಟನೆ ನಡೆಸುತ್ತಾರೆ, ”ಎಂದು ಹೇಳಿದರು.

‘ರಾಜ್ಯದ ಜನರು ಸರಕಾರದ ಮೇಲೆ ಸಂಪೂರ್ಣ ನಂಬಿಕೆ ಇಡಬೇಕು. ನಾವು ಕ್ರಮ ಕೈಗೊಂಡಿದ್ದೇವೆ ಮತ್ತು ಕೋಮು ಸೌಹಾರ್ದ ಕದಡಲು ಬಿಡುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next