Advertisement

ಸಿಇಟಿ ಎರಡನೇ ದಿನ ಶೇ.95ಕ್ಕೂ ಅಧಿಕ ಹಾಜರಾತಿ

09:04 PM Aug 29, 2021 | Team Udayavani |

ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ಯಾವುದೇ ಅಡೆ ತಡೆ ಇಲ್ಲದೆ ಸುಸೂತ್ರವಾಗಿ ಸಿಇಟಿ ನಡೆದಿದ್ದು, ಭೌತಶಾಸ್ತ್ರ ಪರೀಕ್ಷೆಯಲ್ಲಿ ಶೇ.95.91 ಹಾಗೂ ರಸಾಯನ ಶಾಸ್ತ್ರದಲ್ಲಿ ಶೇ.95.88ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ.

Advertisement

ಭೌತಶಾಸ್ತ್ರ ಮತ್ತು ರಸಾಯನ ಶಾಸ್ತ್ರ ವಿಷಯಗಳಿಗೆ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆದಿದ್ದು, ನೋಂದಣಿ ಮಾಡಿಸಿದ್ದ 2,01,834 ಅಭ್ಯರ್ಥಿಗಳಲ್ಲಿ 1,93588 ಅಭ್ಯರ್ಥಿಗಳು ಭೌತಶಾಸ್ತ್ರ ವಿಷಯಕ್ಕೆ ಮತ್ತು 1,93,522 ಅಭ್ಯರ್ಥಿಗಳು ರಸಾಯನಶಾಸ್ತ್ರ ವಿಷಯಕ್ಕೆ ಹಾಜರಾಗಿದ್ದರು.

ರಾಜ್ಯಾದ್ಯಂತ 530 ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್‌ ಎಸ್‌ಒಪಿ ಅನುಸಾರ ಪರೀಕ್ಷೆ ನಡೆದಿದೆ.

ಕೋವಿಡ್‌ ಪಾಸಿಟಿವ್‌ ಇದ್ದ 12 ಅಭ್ಯರ್ಥಿಗಳು ಹಾಜರಾಗಿದ್ದರು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಸೋಮವಾರ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಬೀದರ್‌, ಬೆಳಗಾವಿ, ಬಳ್ಳಾರಿ, ವಿಜಯಪುರ, ಮಂಗಳೂರು ಮತ್ತು ಬೆಂಗಳೂರು ಕೇಂದ್ರಗಳಲ್ಲಿ ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ. 1,682 ಅಭ್ಯರ್ಥಿಗಳು ಈ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆಂದು ಮಾಹಿತಿ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next