Advertisement

Bandipur Tiger Safari; ಪ್ರವಾಸಿಗರ ಗಮನಕ್ಕೆ: ಸೆ.20ರಂದು ಬಂಡೀಪುರ ಸಫಾರಿ ಬಂದ್

06:47 PM Sep 19, 2023 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯ ಸಫಾರಿ ಕೇಂದ್ರದಲ್ಲಿ ಸೆ.20ರಂದು ‘ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿಗಳ ದಿನ’ ಕಾರ್ಯಕ್ರಮದ ಹಿನ್ನಲೆ ಅಂದು ಸಫಾರಿ ವೀಕ್ಷಣೆ ಸ್ಥಗಿತಗೊಳಿಸಲಾಗಿದೆ.

Advertisement

ಬಂಡೀಪುರ ಅರಣ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿ ವರ್ಗದವರ ಸಾಧನೆ ಸ್ಮರಿಸಿ ಅವರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಸೆ.20ರಂದು ಬೆಳಿಗ್ಗೆ ಮತ್ತು ಸಂಜೆ ಸಮಯ ಸಫಾರಿ ಸ್ಥಗಿತಗೊಳಿಸಲಾಗಿದೆ ಎಂದು ಅರಣ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ.

ಈ ಕುರಿತು ಬಂಡೀಪುರ ಅರಣ್ಯಾಧಿಕಾರಿ ಡಾ.ಪಿ.ರಮೇಶಕುಮಾರ್ ಪ್ರತಿಕ್ರಿಯೆ ನೀಡಿ, ಸೆ.20ರ ಬೆಳಿಗ್ಗೆ 11:30ಕ್ಕೆ ಮೇಲುಕಾಮನಹಳ್ಳಿಯ ಸಫಾರಿ ಕೇಂದ್ರದಲ್ಲಿ `ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿಗಳ ದಿನ’ ಎಂಬ ಕಾರ್ಯಕ್ರಮ ಆಚರಿಸಲು ಉದ್ದೇಶಿಸಲಾಗಿದೆ.

ಅಧ್ಯಕ್ಷತೆಯನ್ನು ಶಾಸಕ ಎಚ್.ಎಂ. ಗಣೇಶಪ್ರಸಾದ್ ವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಬಂಡೀಪುರ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಖಾಯಂ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಕುಟುಂಬ ಸದಸ್ಯರೊಂದಿಗೆ ಆಗಮಿಸುವಂತೆ ಆಹ್ವಾನ ನೀಡಲಾಗಿದ್ದು, ವಿಶೇಷ ಸಾಧನೆಗೈದಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಬಹುಮಾನ ವಿತರಣೆ ಹಾಗೂ ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಸೆ.20ರಂದು ಸಫಾರಿ ವೀಕ್ಷಣೆ ಸ್ಥಗಿತಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next