Advertisement

Attibele: ಪಟಾಕಿ ದುರಂತ- ಮ್ಯಾಜಿಸ್ಟೀರಿಯಲ್‌ ವಿಚಾರಣೆ

11:17 PM Oct 17, 2023 | Team Udayavani |

ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದ ಬಗ್ಗೆ ಮ್ಯಾಜಿಸ್ಟೀರಿಯಲ್‌ ವಿಚಾರಣೆ ನಡೆಸಲು ತೀರ್ಮಾನಿಸಿದ್ದು, ವಿಚಾರಣಾಧಿಕಾರಿಯನ್ನಾಗಿ ಹಿರಿಯ ಐಎಎಸ್‌ ಅಧಿಕಾರಿ ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮಲಾನ್‌ ಆದಿತ್ಯ ಬಿಸ್ವಾಸ್‌ ಅವರನ್ನು ನೇಮಿಸಿ ಸರಕಾರ ಆದೇಶಿಸಿದೆ.

Advertisement

ಮೂರು ತಿಂಗಳಲ್ಲಿ ಪ್ರಕರಣದ ವಿಚಾರಣೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಲು ಆದೇಶದಲ್ಲಿ ಸೂಚಿಸಲಾಗಿದೆ. ಪುಸ್ತಾವನೆಯಲ್ಲಿ ವಿವರಿಸಿದ ಅಂಶಗಳ ಹಿನ್ನೆಲೆಯಲ್ಲಿ, ಬೆಂಗಳೂರು ನಗರ ಜಿಲ್ಲೆ , ಅತ್ತಿಬೆಲೆ ಬಾರ್ಡರ್‌ನ ಶ್ರೀ ಬಾಲಾಜಿ ಟ್ರೇಡರ್ಸ್‌, ಪಟಾಕಿ ದಾಸ್ತಾನಿನಲ್ಲಿ ಅ. 7ರಂದು ನಡೆದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಾವಿಗೆ ಕಾರಣಗಳು, ಘಟನಾವಳಿಗಳ ಸರಣಿ ಹಾಗೂ ಸನ್ನಿವೇಶಗಳ ಬಗ್ಗೆ, ಪಟಾಕಿ ದಾಸ್ತಾನು ಮಳಿಗೆಗೆ ಸ್ಫೋಟಕ ಕಾಯ್ದೆ-1884ರ ಸೆಕ್ಷನ್‌ 6ಬಿ ರನ್ವಯ ಸ್ಥಳ ತನಿಖೆ ನಡೆಸಬೇಕು. ಸಮಗ್ರವಾಗಿ ಮ್ಯಾಜಿಸ್ಟೀರಿಯಲ್‌ ವಿಚಾರಣೆ ನಡೆಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next