Advertisement

ಅತ್ತೂರು ಉತ್ಸವದಲ್ಲಿ ಜನಸಾಗರ: ಇನ್ನು ಒಂದು ದಿನ ಮಾತ್ರ ಬಾಕಿ

09:03 PM Jan 25, 2023 | Team Udayavani |

ಕಾರ್ಕಳ: ಅತ್ತೂರು ಸಂತ ಲಾರೆನ್ಸ್‌ ಬಸಿಲಿಕಾದ ವಾರ್ಷಿಕೋತ್ಸವ ಕೊನೆಗೊಳ್ಳಲು ಇನ್ನು ಒಂದು ದಿನ ಮಾತ್ರ ಬಾಕಿ ಉಳಿದಿದ್ದು ಜಾತ್ರೆಗೆ ಜನಸಾಗರವೇ ಹರಿದು ಬರುತ್ತಿದೆ.

Advertisement

ಮೂರು ದಿನಗಳಿಂದ ಹಗಲು ರಾತ್ರಿಯೆನ್ನದೆ ಜನತೆ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಲಿ, ಮಾಜಿ ಸಚಿವರಾದ ವಿನಯಕುಮಾರ್‌ ಸೊರಕೆ, ಅಭಯಚಂದ್ರ ಜೈನ್‌ ಮೊದಲಾದ ಗಣ್ಯರು ಪುಣ್ಯಕ್ಷೇತ್ರಕ್ಕೆ ಆಗಮಿಸಿ ಸಂತ ಲಾರೆನ್ಸರ ದರ್ಶನ ಪಡೆದಿದ್ದಾರೆ.

ರಾಜ್ಯದ ವಿವಿಧೆಡೆ ಹಾಗೂ ಹೊರ ರಾಜ್ಯಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು ಸಂಜೆಯಾಗುತ್ತಲೇ ಚರ್ಚ್‌ ಪರಿಸರದಲ್ಲಿ ಜನಸಾಗರ ಕಂಡು ಬರುತ್ತಿದೆ. ಪರಿಸರದಲ್ಲಿ 500ಕ್ಕೂ ಅಧಿಕ ವಿವಿಧ ವ್ಯಾಪಾರ ಮಳಿಗೆಗಳು ತೆರೆದಿದ್ದು ವ್ಯಾಪಾರ ವಹಿವಾಟು ಭರ್ಜರಿಯಾಗಿ ನಡೆಯುತ್ತಿದೆ. ಜಾತ್ರೆಯ ಕೊನೆಯ ದಿನಗಳಲ್ಲಿ ಇನ್ನಷ್ಟು ಭಕ್ತರು ಆಗಮಿಸುವ ನಿರೀಕ್ಷೆಯಿದೆ.

ಕಾರ್ಕಳ ಜನ, ವಾಹನ ದಟ್ಟಣೆ
ಅತ್ತೂರು ಜಾತ್ರೆ ಹಾಗೂ ಬೈಲೂರಿನ ಉಮಿಕ್ಕಳ ಬೆಟ್ಟದಲ್ಲಿ ಪರಶುರಾಮ ಪ್ರತಿಮೆ ಲೋಕಾರ್ಪಣೆ ಎರಡೂ ಜತೆಯಾಗಿಯೇ ನಡೆಯುತ್ತಿದ್ದು, ಕಾರ್ಕಳದಲ್ಲಿ ಜನದಟ್ಟನೆ, ವಾಹನ ದಟ್ಟನೆ ಹೆಚ್ಚಿದೆ. ಜ. 27ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಹಿಡಿದು ಮುಂದಿನ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯದ ಮಂತ್ರಿಗಳು, ಶಾಸಕರು, ಕಲಾವಿದರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಎಲ್ಲ ವಸತಿಗೃಹಗಳ ಕೊಠಡಿಗಳು ಭರ್ತಿಯಾಗಿವೆ. ಮಂತ್ರಿಗಳ ದಂಡೇ ಕಾರ್ಕಳಕ್ಕೆ ಆಗಮಿಸುತ್ತಿರುವುದರಿಂದ ಎಲ್ಲ ಇಲಾಖೆಗಳ ಅಧಿಕಾರಿಗಳು ಕಾರ್ಕಳದಲ್ಲಿ ಮೊಕ್ಕಂ ಹೂಡಿದ್ದು. ಎಲ್ಲ ವಸತಿಗೃಹಗಳ ಕೊಠಡಿಗಳು ಭರ್ತಿಯಾಗಿವೆ. ಕೊಠಡಿಗಳಿಗೆ ಪರದಾಡುವ ಸ್ಥಿತಿ ಎದುರಾಗಿದೆ.

ಇದನ್ನೂ ಓದಿ: ಭೇಟೆಗೆಂದು ತೆರೆಳಿದ್ದ ವ್ಯಕ್ತಿಯನ್ನು ಗುಂಡಿಟ್ಟು ಕೊಂದ ಶ್ವಾನ ! ನಡೆದಿದ್ದರೂ ಏನು?

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next