Advertisement

Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು

11:12 PM Sep 17, 2024 | Team Udayavani |

ಹೊಸದಿಲ್ಲಿ: ಅಯೋಧ್ಯೆಯ ರಾಮಮಂದಿರ ಪ್ರತಿಕೃತಿ, ಪ್ಯಾರಾಲಿಂಪಿಕ್ಸ್‌ ನೆನಪಿನ ಕಾಣಿಕೆ ಸೇರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಂದಿರುವ 600ಕ್ಕೂ ಹೆಚ್ಚು ಉಡುಗೊರೆಗಳ ಹರಾಜು ಪ್ರಕ್ರಿಯೆ ಮಂಗಳವಾರ ಆರಂಭವಾಗಿದೆ.

Advertisement

ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಈ ಆನ್‌ಲೈನ್‌ ಹರಾಜು ನಡೆಸಲಾಗುತ್ತಿದ್ದು, 2019ರಲ್ಲಿ ಇದು ಆರಂಭವಾಗಿದೆ. ಇದರಲ್ಲಿ ಸಂಗ್ರಹವಾದ ಹಣವನ್ನು ಸೈನಿಕರ ಕ್ಷೇಮಾಭಿವೃದ್ಧಿಗೆ ಬಳಕೆ ಮಾಡಲಾಗುತ್ತದೆ ಎಂದು ಸಂಸ್ಕೃತಿ ಸಚಿವಾಲಯ ತಿಳಿಸಿದೆ. ಅ.2ರ ವರೆಗೆ ಈ ಹರಾಜು ಪ್ರಕ್ರಿಯೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next