Advertisement

ಆಡಿಯೋ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

01:05 AM Feb 21, 2019 | |

ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ಧ “ಆಪರೇಷನ್‌ ಆಡಿಯೋ’ ಆರೋಪದಡಿ ರಾಯಚೂರು ಜಿಲ್ಲೆ ದೇವದುರ್ಗ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ದಾಖಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಇಲ್ಲಿನ ಹೈಕೋರ್ಟ್‌ ಪೀಠ, ತೀರ್ಪು ಕಾಯ್ದಿರಿಸಿದೆ. ಯಡಿಯೂರಪ್ಪ, ಶಾಸಕ ಶಿವನಗೌಡ ನಾಯಕ ಸೇರಿ ನಾಲ್ವರ ವಿರುದಟಛಿ ರಾಯಚೂರು ಜಿಲ್ಲೆ ದೇವದುರ್ಗ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್‌ ರದ್ದು ಮಾಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಬಿಎಸ್‌ವೈ ಪರ ಹಿರಿಯ ನ್ಯಾಯವಾದಿ ಸಿ.ವಿ.ನಾಗೇಶ ವಾದ ಮಂಡಿಸಿ, ತಮ್ಮ ಕಕ್ಷಿದಾರರ ಹೆಸರಿಗೆ ಚ್ಯುತಿ ತರುವ ಉದ್ದೇಶದಿಂದಲೇ ರಾಜಕೀಯ ಸಂಚು ನಡೆಸಿ ಕೇಸ್‌ ದಾಖಲಾಗಿಸಲಾಗಿದೆ. ತಮ್ಮ ಕಕ್ಷಿದಾರರು ಪ್ರಜಾಪ್ರತಿನಿಧಿ ಕಾಯ್ದೆಯಂತೆ ಜನಸೇವಕರಿಗೆ ಲಂಚದ ಆಮಿಷವೊಡ್ಡಿಲ್ಲ ಎಂದರು. ಈ ಕುರಿತು ಸುಪ್ರೀಂಕೋರ್ಟ್‌ ನೀಡಿರುವ ಎರಡು ತೀರ್ಪುಗಳ ಪ್ರತಿಗಳನ್ನು ಸಹ ನ್ಯಾಯಮೂರ್ತಿಗಳಿಗೆ ಸಲ್ಲಿಸಿದರು.

Advertisement

ಸರ್ಕಾರದ ಪರವಾಗಿ ಹೆಚ್ಚುವರಿ ಅಡ್ವೋಕೇಟ್‌ಜನರಲ್‌ ಸಂದೇಶ ಚೌಟಾ ವಾದ ಮಂಡಿಸಿ, ಎಫ್‌ಐಆರ್‌ ರದ್ದು ಮಾಡಬಾರದು. ವಿಚಾರಣೆ ನಡೆಸಬೇಕು ಎಂದು ವಾದಿಸಿದರು. ವಾದ, ಪ್ರತಿವಾದ ಆಲಿಸಿದ ಹೈಕೋರ್ಟ್‌ ನ್ಯಾಯಮೂರ್ತಿ ಪಿ.ಜಿ.ಎಂ.ಪಾಟೀಲ, ಮೂರು ದಿನದಲ್ಲಿ ತೀರ್ಪು ಪ್ರಕಟಿಸುವುದಾಗಿ ಹೇಳಿ ಆದೇಶ ಕಾಯ್ದಿರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next