Advertisement

ಎ.13: ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ

10:56 AM Apr 05, 2019 | Team Udayavani |

ಮಂಗಳೂರು: ಲೋಕಸಭಾ ಚುನಾವಣೆ ಸಂಬಂಧ ಬಿಜೆಪಿಯ ಪ್ರಚಾರ ಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಅವರು ಎ.13ರಂದು ಮಧ್ಯಾಹ್ನ 3.30ಕ್ಕೆ ಮಂಗಳೂರಿಗೆ ಆಗಮಿಸಲಿದ್ದಾರೆ.

Advertisement

ಪ್ರಧಾನಿ ಮಂಗಳೂರು ಭೇಟಿಯ ಹಿನ್ನೆಲೆಯಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರಿ ಹಾಗೂ ಕಾರ್ಕಳ ಶಾಸಕ ವಿ.ಸುನೀಲ್‌ ಕುಮಾರ್‌ ಅವರು ಬಂಟ್ವಾಳದಲ್ಲಿ ಗುರುವಾರ ಜಿಲ್ಲೆಯ ಬಿ.ಜೆ.ಪಿ. ಶಾಸಕರ ತುರ್ತು ಸಭೆ ನಡೆಸಿದರು. ಎ.6ರಂದು ಬೆಳಗ್ಗೆ 8 ಗಂಟೆಗೆ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಚಪ್ಪರ ಮುಹೂರ್ತ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಸಚಿವರು, ಶಾಸಕರು, ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕ ಆರ್‌. ಅಶೋಕ್‌ ಅವರು ಭಾಗವಹಿಸಲಿದ್ದಾರೆ.

“ಮೋದಿ ಆಗಮನ ಕಾರ್ಯಕ್ರಮದ ವ್ಯವಸ್ಥೆಯನ್ನು ನೋಡಿಕೊಳ್ಳಲು ಪ್ರತ್ಯೇಕ ಸಮಿತಿ ರಚಿಸಲಾಗಿದೆ. ಸುಮಾರು 2 ಲಕ್ಷಕ್ಕೂ ಮಿಕ್ಕಿ ಮೋದಿ ಅವರ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆ ಇದೆ’ ಎಂದು ವಿ. ಸುನೀಲ್‌ ಕುಮಾರ್‌ ತಿಳಿಸಿದರು.

ಸಂಸದ, ಬಿಜೆಪಿ ಅಭ್ಯರ್ಥಿ ನಳಿನ್‌ ಕುಮಾರ್‌ ಕಟೀಲು, ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಶಾಸಕರಾದ ಸಂಜೀವ ಮಠಂದೂರು, ಎಸ್‌. ಅಂಗಾರ, ಡಿ. ವೇದವ್ಯಾಸ ಕಾಮತ್‌, ಉಮಾನಾಥ್‌ ಕೋಟ್ಯಾನ್‌, ಡಾ| ಭರತ್‌ ವೈ. ಶೆಟ್ಟಿ, ಹರೀಶ್‌ ಪೂಂಜಾ, ರಾಜೇಶ್‌ ನಾೖಕ್‌, ಜಿಲ್ಲಾ ವಿಭಾಗ ಸಹ ಪ್ರಭಾರಿ ಪ್ರತಾಪಸಿಂಹ ನಾಯಕ್‌, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್‌ ಕುಮಾರ್‌, ಜಿಲ್ಲಾ ಚುನಾವಣಾ ಸಂಚಾಲಕ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಉಪಾಧ್ಯಕ್ಷ ರವಿಶಂಕರ ಮಿಜಾರ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಮೂಡುಬಿದ್ರೆ ಸಭೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next