Advertisement

ದುಬೈ: ಸ್ವಾತಂತ್ರ್ಯೋತ್ಸವದಂದು ಗಾಂಧಿ ಪ್ರತಿಮೆ ಅನಾವರಣ

10:09 AM Aug 14, 2019 | sudhir |

ದುಬೈ: ಯುಎಇನಲ್ಲಿ ಈ ಬಾರಿಯ ಭಾರತದ 73ನೇ ಸ್ವಾತಂತ್ರ್ಯೋತ್ಸವಕ್ಕೆ ಹೆಚ್ಚಿನ ಮಹತ್ವ ಬಂದಿದೆ. ಆಗಸ್ಟ್ 15ರಂದು ಅಬುಧಾಬಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಯೊಂದು ಅನಾವರಣಕ್ಕೆ ಸಿದ್ಧವಾಗಿದೆ.
ದುಬೈನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಗಾಂಧಿ ಪ್ರತಿಮೆಯೊಂದನ್ನು ನಿರ್ಮಿಸಿದ್ದು, ಅದರ ಉದ್ಘಾಟನೆ ಆಗಸ್ಟ್ 15ರಂದು ನೆರವೇರಲಿದೆ.

Advertisement

ಯುಎಇನಲ್ಲಿರುವ ಭಾರತೀಯ ರಾಯಭಾರಿ ನವದೀಪ್ ಸಿಂಗ್ ಸುರಿ ಅವರು ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

8 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ಆರಂಭವಾಗಲಿದ್ದು, ಭಾರತದ ಕಾನ್ಸುಲ್ ಜನರಲ್ ವಿಪುಲ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ಸಂದರ್ಭ ಉಭಯ ದೇಶಗಳ ಉನ್ನತ ಅಧಿಕಾರಿಗಳು ಭಾಗವಹಿಸುವ ನಿರೀಕ್ಷೆ ಇದೆ. ಧ್ವಜಾರೋಹಣದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ ಎಂದು ಗಲ್ಫ್ ನ್ಯೂಸ್ ವರದಿ ಮಾಡಿದೆ.

ಈ ವರ್ಷ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 150ನೇ ಹುಟ್ಟು ಹಬ್ಬವನ್ನು ಭಾರತದಲ್ಲಿ ಮಾತ್ರವಲ್ಲದೇ ವಿಶ್ವಾದ್ಯಂತ ಆಚರಿಸಲಾಗುತ್ತಿದೆ. ಇದರ ಸವಿನೆನಪಿಗಾಗಿ ದುಬೈನಲ್ಲಿ ಗಾಂಧಿ ಪ್ರತಿಮೆಯನ್ನು ಭಾರತೀಯ ರಾಯಭಾರಿ ಕಚೇರಿ ನಿರ್ಮಿಸಿದೆ. ಅಕ್ಟೋಬರ್ 2ರಂದು ಗಾಂಧೀಜಿ ಜನಿಸಿ 150 ವರ್ಷ ಪೂರ್ಣಗೊಳ್ಳಲಿದೆ. ಭಾರತೀಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹಾತ್ಮ ಗಾಂಧೀಜಿ ಅವರ ಪಾತ್ರ ಪ್ರಮುಖವಾಗಿದ್ದು ಈ ಹಿನ್ನೆಲೆಯಲ್ಲಿ ಅವರ 150 ಜನ್ಮದಿನದ ಸಂಭ್ರಮ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿಯೇ ಪ್ರತಿಮೆ ಲೋಕಾರ್ಪಣೆಗೊಳ್ಳುತ್ತಿರುವುದು ಅರ್ಥಪೂರ್ಣವಾಗಿದೆ. ದುಬೈನಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರು ಉದ್ಯೋಗ ಮಾಡುತ್ತಿದ್ದಾರೆ. ಹೀಗಾಗಿ ಈ ಸಂಭ್ರಮಾಚರಣೆಯಲ್ಲಿ ದುಬೈಯೂ ಭಾಗಿಯಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next