Advertisement

ಅಗಸ್ಟಾ ಪ್ರಕರಣ: ಇ.ಡಿ ವಶಕ್ಕೆ ಮೈಕೆಲ್‌ 

06:00 AM Dec 23, 2018 | Team Udayavani |

ಹೊಸದಿಲ್ಲಿ: ಅಗಸ್ಟಾ ವೆಸ್ಟ್‌ಲ್ಯಾಂಡ್‌ ವಿವಿಐಪಿ ಕಾಪ್ಟರ್‌ ಹಗರಣದ ಮಧ್ಯವರ್ತಿ ಕ್ರಿಶ್ಚಿಯನ್‌ ಮೈಕೆಲ್‌ನನ್ನು ಜಾರಿ ನಿರ್ದೇಶನಾಲಯ (ಇ.ಡಿ.) ತನ್ನ ವಶಕ್ಕೆ ಪಡೆದಿದೆ. ಇತ್ತೀಚೆಗೆ, ಯುಎಇಯಿಂದ ಭಾರತಕ್ಕೆ ಹಸ್ತಾಂತರಗೊಂಡಿದ್ದ ಮೈಕೆಲ್‌ನನ್ನು ಮೊದಲು ಸಿಬಿಐ ತನ್ನ ವಶದಲ್ಲಿ ವಿಚಾರಣೆಗೊಳಪಡಿಸಿತ್ತು.

Advertisement

ಹಣಕಾಸು ಅಕ್ರಮ ವರ್ಗಾವಣೆ ವಿಚಾರವಾಗಿ ಮತ್ತಷ್ಟು ತನಿಖೆ ನಡೆಸಲು ಆತನನ್ನು 15 ದಿನಗಳ ಅವಧಿಗೆ ಒಪ್ಪಿಸಬೇಕೆಂದು ಜಾರಿ ನಿರ್ದೇಶನಾಲಯ ಇಲ್ಲಿನ ಸ್ಥಳೀಯ ನ್ಯಾಯಾಲಯದ ಮೊರೆ ಹೋಗಿತ್ತು. ಇ.ಡಿ. ವಾದವನ್ನು ಪುರಸ್ಕರಿಸಿದ ವಿಶೇಷ ನ್ಯಾಯಾಧೀಶ ಅರವಿಂದ್‌ ಕುಮಾರ್‌ ಅವರು ಮೈಕೆಲ್‌ನನ್ನು ಕೋರ್ಟ್‌ನಲ್ಲೇ 15 ನಿಮಿಷ ವಿಚಾರಣೆಗೆ ಒಳಪಡಿಸಲು ಅವಕಾಶ ನೀಡಿದರು. ಆದಾದ ನಂತರ, 15 ದಿನಗಳ ಕಾಲ ಇ.ಡಿ. ವಶಕ್ಕೆ ಒಪ್ಪಿಸಿ ಆದೇಶ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next