ಸಿಡ್ನಿ; ಚೈನಾಮನ್ ಸ್ಪಿನ್ನರ್ ಕುಲದೀಪ್ ಯಾದವ್ ಅವರ ಮಾರಕ ದಾಳಿಗೆ ಬೆದರಿದ ಆಸೀಸ್ ಮೊದಲ ಇನ್ನಿಂಗ್ಸ್ ನಲ್ಲಿ 300 ರನ್ ಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿದೆ. 322 ರನ್ ಗಳ ಬೃಹತ್ ಮೊದಲ ಇನ್ನಿಂಗ್ಸ್ ಮುನ್ನಡೆ ಪಡೆದ ಭಾರತ ಆಸೀಸ್ ಗೆ ಫಾಲೋ ಆನ್ ಹೇರಿದೆ.
ನಾಲ್ಕನೇ ದಿನದಾಟ ಆರಂಭದಲ್ಲಿ ಮಂದಬೆಳಕಿನ ಕಾರಣದಿಂದ ಪಂದ್ಯ ತಡವಾಗಿ ಆರಂಭವಾಗಿತ್ತು. ಮೂರನೇ ದಿನದ ಅಂತ್ಯಕ್ಕೆ ಆರು ವಿಕೆಟ್ ನಷ್ಟಕ್ಕೆ 236 ರನ್ ಗಳಿಸಿದ್ದ ಆಸ್ಟ್ರೇಲಿಯಾ ರವಿವಾರ ಭರ್ತಿ 300 ರನ್ ಗೆ ಅಲ್ ಔಟ್ ಆಯಿತು. ಭಾರತದ ಪರ ಕುಲದೀಪ್ ಯಾದವ್ 5 ವಿಕೆಟ್ ಪಡೆದು ಮಿಂಚಿದರು.
ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡ 4 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 6 ರನ್ ಗಳಿಸಿದ್ದಾಗ ಮಂದಬೆಳಕಿನ ಕಾರಣದಿಂದ ಪಂದ್ಯಕ್ಕೆ ತೊಡಕುಂಟಾಯಿತು.
ಸೋಮವಾರ ಪಂದ್ಯದ ಕೊನೆಯ ದಿನವಾಗಿದ್ದು ವರುಣ ದೇವ ಕೃಪೆ ತೋರಿದರೆ ಭಾರತ ಪಂದ್ಯ ಗೆದ್ದು ಇತಿಹಾಸ ನಿರ್ಮಿಸುವ ಉತ್ಸಾಹದಲ್ಲಿದೆ .