ಸಿಡ್ನಿ: ಪ್ರವಾಸಿ ಪಾಕಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡವನ್ನು ಹೆಸರಿಸಲಾಗಿದೆ. ಈ ತಂಡದಲ್ಲಿ ಎಡಗೈ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಸ್ಥಾನ ಪಡೆದಿದ್ದಾರೆ. ಈ ಮೂಲಕ ವಿದಾಯದ ಸರಣಿ ಆಡುವ ಅವಕಾಶ ಪಡೆದಿದ್ದಾರೆ.
ಡಿಸೆಂಬರ್ 14ರಿಂದ 19ರವರಗೆ ಪರ್ತ್ ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಮಾತ್ರ 14 ಮಂದಿ ಆಟಗಾರರ ತಂಡ ನೇಮಿಸಲಾಗಿದೆ.
ಪರ್ತ್ ಪಂದ್ಯದಲ್ಲಿ ಆಡುವ ಅವಕಾಶ ಪಡೆದು, ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಎರಡನೇ ಟೆಸ್ಟ್‌ಗೆ ಅವರು ತಮ್ಮ ಸ್ಥಾನವನ್ನು ಪಡೆದರೆ, ವಾರ್ನರ್ ಜನವರಿ 3 ರಿಂದ 7 ರವರೆಗೆ ಸಿಡ್ನಿಯ ತಮ್ಮ ತವರು ಮೈದಾನದಲ್ಲಿ ಅವರ ವಿದಾಯದ ಪಂದ್ಯವಾಡಲಿದ್ದಾರೆ.
2019ರ ಬಳಿಕ ಟೆಸ್ಟ್ ಕ್ರಿಕೆಟ್ ನಲ್ಲಿ ವಾರ್ನರ್ ಪ್ರದರ್ಶನ ಅಷ್ಟಕ್ಕಷ್ಟೇ ಎಂಬಂತ್ತಿದೆ. ಹೀಗಾಗಿ ಅವರು ಸಿಡ್ನಿ ಟೆಸ್ಟ್ ಪಂದ್ಯವೇ ತನ್ನ ಟೆಸ್ಟ್ ವೃತ್ತಿ ಜೀವನದ ಕೊನೆಯ ಪಂದ್ಯವಾಗಲಿದೆ ಎಂದು ಕೆಲ ತಿಂಗಳ ಹಿಂದೆಯೇ ಸೂಚಿಸಿದ್ದರು. ವೈಟ್ ಬಾಲ್ ಕ್ರಿಕೆಟ್ ನಲ್ಲಿ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದ್ದರು.
ಆಸ್ಟ್ರೇಲಿಯಾ ತಂಡ
ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲಬುಶೇನ್, ನಾಥನ್ ಲಿಯಾನ್, ಮಿಚ್ ಮಾರ್ಷ್, ಲ್ಯಾನ್ಸ್ ಮೋರಿಸ್, ಸ್ಟೀವ್ ಸ್ಮಿತ್, ಮಿಚ್ ಸ್ಟಾರ್ಕ್, ಡೇವಿಡ್ ವಾರ್ನರ್.