ಹೊಸದಿಲ್ಲಿ : ಬಿಸಿಸಿಐ ಇಂದು ಸೋಮವಾರ ಆಸ್ಟ್ರೇಲಿಯ ಮತ್ತು ನ್ಯೂಜೀಲ್ಯಾಂಡ್ ಎದುರು ಏಕದಿನ ಮತ್ತು ಟಿ-20 ಪಂದ್ಯ ಸರಣಿಗಳನ್ನು ಆಡಲಿರುವ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಿದೆ.
ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್ ಮಹೇಂದ್ರ ಸಿಂಗ್ ಧೋನಿ ಅವರು ನ್ಯೂಜಿಲ್ಯಾಂಡ್ ವಿರುದ್ಧ ಟಿ-20 ಸರಣಿಯನ್ನು ಆಡುವ ಭಾರತ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
16 ಸದಸ್ಯರ ಭಾರತೀಯ ಒನ್‌ಡೇ ತಂಡ ಇಂತಿದೆ : ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆ ಎಲ್ ರಾಹುಲ್, ಶಿಖರ್ ಧವನ್, ಅಂಬಾಟಿ ರಾಯುಡು, ದಿನೇಶ್ ಕಾರ್ತಿಕ್, ಕೇದಾರ್ ಜಾಧವ್, ಎಂ ಎಸ್ ಧೋನಿ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ಯಜುವೇಂದ್ರ ಚಹಾಲ್, ರವೀಂದ್ರ ಜಡೇಜ, ಭುವನೇಶ್ವರ ಕುಮಾರ್, ಜಸ್‌ಪ್ರೀತ್ ಬುಮ್ರಾ, ಖಲೀಲ್ ಅಹ್ಮದ್, ಮೊಹಮ್ಮದ್ ಶಮಿ.
ನ್ಯೂಜಿಲ್ಯಾಂಡ್‌ನಲ್ಲಿ ಟಿ-20 ಸರಣಿಯನ್ನು ಆಡಲಿರುವ ಭಾರತೀಯ ಕ್ರಿಕೆಟ್ ತಂಡ ಇಂತಿದೆ :
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆ ಎಲ್ ರಾಹುಲ್, ಶಿಖರ್ ಧವನ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಕೇದಾರ್ ಜಾಧವ್, ಎಂ ಎಸ್ ಧೋನಿ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಹಾಲ್, ಭುವನೇಶ್ವರ ಕುಮಾರ್, ಜಸ್‌ಪ್ರೀತ್ ಬುಮ್ರಾ, ಖಲೀಲ್ ಅಹ್ಮದ್.
ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್ ಮಹೇಂದ್ರ ಸಿಂಗ್ ಧೋನಿ ಅವರು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ತಮ್ಮನ್ನು ಕೈಬಿಡಲಾದ ಬಳಿಕ ಟಿ-20ಸರಣಿಗೆ ಮರಳುತ್ತಿದ್ದಾರೆ.
ಇಂಗ್ಲಂಡ್ ನಲ್ಲಿ ನಡೆಯಲಿರುವ ಮುಂದಿನ ವಿಶ್ವಕಪ್ ದೃಷ್ಟಿಯಲ್ಲಿ ಭಾರತಕ್ಕೆ ಆಸೀಸ್, ಕಿವೀಸ್ ಕಿರು ಆವೃತ್ತಿಯ ಸರಣಿಗಳು ಮುಖ್ಯವಾಗಿವೆ.