Advertisement
ಆಸ್ಟ್ರೇಲಿಯಾ ಬೌಲಿಂಗ್ ದಾಳಿಗೆ ಸಿಲುಕಿದ ಹರಿಣಗಳು ಎರಡನೇ ಇನ್ನಿಂಗ್ಸ್ ನಲ್ಲಿ 204 ರನ್ ಗೆ ಆಲೌಟಾದರು. ಇದರೊಂದಿಗೆ ಪ್ಯಾಟ್ ಕಮಿನ್ಸ್ ಪಡೆ ಇನ್ನಿಂಗ್ ಮತ್ತು 182 ರನ್ ಅಂತರದ ವಿಜಯ ಸಾಧಿಸಿತು.
Related Articles
Advertisement
ಮೊದಲ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ 189 ರನ್ ಗಳಿಸಿದ್ದರೆ, ಆಸೀಸ್ ತಂಡವು 575 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿತ್ತು. ದ್ವಿಶತಕ ಬಾರಿಸಿದ ಡೇವಿಡ್ ವಾರ್ನರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಈ ಪಂದ್ಯದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪಟ್ಟಿಯಲ್ಲಿ ತನ್ನ ಮೊದಲ ಸ್ಥಾನವನ್ನು ಮತ್ತಷ್ಟು ಭದ್ರ ಮಾಡಿಕೊಂಡಿದೆ. ಆಸೀಸ್ 78.57 ಅಂಕದೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, 58.93 ಅಂಕಗಳೊಂದಿಗೆ ಭಾರತ ಎರಡನೇ ಸ್ಥಾನದಲ್ಲಿದೆ. ಪಂದ್ಯ ಸೋತ ದಕ್ಷಿಣ ಆಫ್ರಿಕಾ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.