ನವದೆಹಲಿ: ವ್ಯಾಪಾರ, ಹೂಡಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉಭಯ ದೇಶಗಳ ನಡುವಿನ ಸಂಬಂಧ ಹೆಚ್ಚಿಸುವ ಉದ್ದೇಶದಿಂದ ಆಸ್ಟ್ರೇಲಿಯದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ಮುಂದಿನ ತಿಂಗಳ ಆರಂಭದಲ್ಲಿ ಭಾರತಕ್ಕೆ ತಮ್ಮ ಮೊದಲ ಪ್ರವಾಸವನ್ನು ಕೈಗೊಳ್ಳಲಿದ್ದಾರೆ.
ಮಾರ್ಚ್ 8 ರಂದು ಅಲ್ಬನೀಸ್ ಭೇಟಿಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಅಷ್ಟೇ ಅಲ್ಲದೆ ಆಸ್ಟ್ರೇಲಿಯ ಜೊತೆ ಉತ್ತಮ ಸಂಬಂಧ ಹೊಂದಿರುವ ಭಾರತ, ಆಸೀಸ್ ಪ್ರಧಾನಿ ಜೊತೆ ಮೋದಿ ಅವರು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಕ್ರಿಕೆಟ್ ಟೆಸ್ಟ್ ಪಂದ್ಯವನ್ನು ವೀಕ್ಷಿಸಲು ಅಹಮದಾಬಾದ್‌ಗೆ ಪ್ರಯಾಣಿಸುವ ಸಾಧ್ಯತೆಯಿದೆ.
ನಾಲ್ಕನೇ ಟೆಸ್ಟ್ ಪಂದ್ಯ ಮಾರ್ಚ್ 9 ರಿಂದ 13 ರವರೆಗೆ ಅಹಮದಾಬಾದ್‌ನಲ್ಲಿ ನಡೆಯಲಿದೆ.
ಕಳೆದ ವರ್ಷ ಮೇ ತಿಂಗಳಲ್ಲಿ ಅವರು ಪ್ರಧಾನಿಯಾದ ನಂತರ ಅಲ್ಬನೀಸ್ ಅವರ ಮೊದಲ ಭಾರತ ಭೇಟಿ ಇದಾಗಿದೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಕಳೆದ ವಾರ ಆಸ್ಟ್ರೇಲಿಯಾಕ್ಕೆ ಭೇಟಿ ನೀಡಿದ್ದರು. ಅಲ್ಬನೀಸ್ ಅವರ ಭೇಟಿ ಕುರಿತು ಇನ್ನೂ ಅಧಿಕೃತ ಘೋಷಣೆಯಾಗಿಲ್ಲ.
ಆದಾಗ್ಯೂ, ಶನಿವಾರ ಜೈಶಂಕರ್ ಅವರನ್ನು ಭೇಟಿಯಾದ ನಂತರ ಅಲ್ಬನೀಸ್ ಅವರು ಭಾರತಕ್ಕೆ ಭೇಟಿ ನೀಡುವ ಬಗ್ಗೆ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಮುಂದಿನ ತಿಂಗಳು ನನ್ನ ಭಾರತ ಪ್ರವಾಸಕ್ಕೆ ಮುಂಚಿತವಾಗಿ ಜೈಶಂಕರ್ ಅವರನ್ನು ಭೇಟಿಯಾಗುವುದು ಅದ್ಭುತವಾಗಿದೆ. ನಮ್ಮ ಕಾರ್ಯತಂತ್ರದ ಪಾಲುದಾರಿಕೆ, ಆರ್ಥಿಕ ಅವಕಾಶಗಳು ಮತ್ತು ನಮ್ಮ ರಾಷ್ಟ್ರಗಳನ್ನು ಶ್ರೀಮಂತಗೊಳಿಸುವ ಜನರ- ನಡುವಿನ ಸಂಬಂಧಗಳ ಬಗ್ಗೆ ನಾವು ಚರ್ಚಿಸಿದ್ದೇವೆ, ಎಂದು ಅವರು ಟ್ವೀಟ್ ಮಾಡಿದ್ದಾರೆ.