ಮಧ್ಯಪ್ರದೇಶ: ಉಜ್ಜಯಿನಿ ನಗರದಲ್ಲಿ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಆರೋಪದ ಮೇಲೆ ರಿಕ್ಷಾ ಚಾಲಕ ಸೇರಿ ಒಟ್ಟು ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆಟೋ ಚಾಲಕನನ್ನು ರಾಕೇಶ್(38 ವರ್ಷ) ಎಂದು ಗುರುತಿಸಲಾಗಿದೆ.
ಘಟನೆ ವಿವರ: ಬುಧವಾರ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ 12 ವರ್ಷದ ಬಾಲಕಿಯೋರ್ವಳು ಅರೆಬೆತ್ತಲೆಯಾಗಿ ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದಳು. ಆನಂತರ ದಾರಿಹೋಕರು ಬಾಲಕಿಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಘಟನಾ ಸ್ಥಳಕ್ಕೆ ಬಂದು ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪರಿಶೀಲಸಿದಾಗ ಬಾಲಕಿಯ ಮೇಲೆ ಅತ್ಯಾಚಾವೆಸಗಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬಿಸಿದ್ದು, ತನಿಖೆ ನಡೆಸಿದ ವೇಳೆ ಬಾಲಕಿ ಜೀವನ್ ಖೇರಿಯಲ್ಲಿ ರಿಕ್ಷಾ ಹತ್ತಿರುವುದು ಸಿಸಿಟಿವಿಯಲ್ಲಿ ಕಂಡು ಬಂದಿದೆ ಅದರ ಆಧಾರದ ಮೇಲೆ ಪೊಲೀಸರು ರಿಕ್ಷಾ ಚಾಲಕನನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ ವೇಳೆ ರಿಕ್ಷಾದಲ್ಲಿ ರಕ್ತದ ಕಲೆಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ರಿಕ್ಷಾ ಚಾಲಕ ಸೇರಿ ಒಟ್ಟು ಮೂವರನ್ನು ಪೊಲೀಸರು ವಶಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಅಲ್ಲದೆ ಬಾಲಕಿ ನಡೆದಾಡಿದ ಪ್ರದೇಶದ ಸಿಸಿಟಿವಿ ಚಿತ್ರಣವನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ