Advertisement

“ಆಟೋ ಚಾಲಕರು ಸಂಚಾರ ನಿಯಮ ಪಾಲಿಸಿ’

01:35 PM Dec 28, 2017 | Team Udayavani |

ಹೊಸಕೋಟೆ: ಆಟೋ ಚಾಲಕರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಡಿವೈಎಸ್‌ಪಿ ಎನ್‌.ಕುಮಾರ್‌ ಸೂಚಿಸಿದರು. ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲೆ ಆವರಣದಲ್ಲಿ ಮೆಸೇಜ್‌ ಆಫೀಸ್‌ ಎಜುಕೇಷನಲ್‌ ಟ್ರಸ್ಟ್‌ ಸಹಯೋಗದಲ್ಲಿ ಪೊಲೀಸ್‌ ಇಲಾಖೆ ವತಿಯಿಂದ “ಅಪರಾಧ ತಡೆ ಮಾಸಾಚರಣೆ’ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

Advertisement

ವಿಮೆಗಾಗಿ ಅನೂಕೂಲ: ಚಾಲಕರು ಕಡ್ಡಾಯವಾಗಿ ಸಮವಸ್ತ್ರ ಧರಿಸಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕಾನೂನು ಸುವ್ಯವಸ್ಥೆ ಕಾಪಾಡಲು ಗಮನಹರಿಸಬೇಕು. ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಆಟೋ ಚಾಲಕರು ಚಾಲನಾ ಪರವಾನಗಿ ಪಡೆಯಲು ಶೀಘ್ರದಲ್ಲಿಯೇ ವ್ಯವಸ್ಥೆ ಮಾಡಲಾಗು ವುದು. ಸಮರ್ಪಕವಾದ ದಾಖಲೆಗಳನ್ನು ಹೊಂದಿದಲ್ಲಿ ಮಾತ್ರ ಅಪಘಾತದಂತಹ ಘಟನೆಗಳು ಸಂಭವಿಸಿದಲ್ಲಿ ವಿಮೆಯಂತಹ ಸೌಲಭ್ಯಗಳನ್ನು
ಪಡೆಯಬಹುದಾಗಿದೆ ಎಂದು ತಿಳಿಸಿದರು. 

ಗಾಳಿ ಸುದ್ದಿ ಹರಡುವದರಿಂದ ಬಹಳಷ್ಟು ದುರಂತ: ಅಪರಾಧ ತಡೆಗಟ್ಟುವಲ್ಲಿ ಪೊಲೀಸರೊಂದಿಗೆ ಸಮುದಾಯದ ಸಹಕಾರ ಅಗತ್ಯವಾಗಿದ್ದು ಪರಸ್ಪರ ಉತ್ತಮ ಸಂಬಂಧ ಹೊಂದಬೇಕು. ಮನೆಗಳ ಬಳಿ ಅಪರಿಚಿತ ವ್ಯಕ್ತಿಗಳ ಅನುಮಾನಾಸ್ಪದ ಓಡಾಟದಂತಹ ಯಾವುದೇ ಸಣ್ಣ ಘಟನೆ ನಡೆದರೂ ಅಗತ್ಯ ಮಾಹಿತಿ ನೀಡಿದಲ್ಲಿ ಸಂಭವಿಸಬಹುದಾದ ಅನಾಹುತ ತಪ್ಪಿಸಲು ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ. ಯಾವುದೇ ಮಾಹಿತಿ ದೊರೆತಲ್ಲಿ ದೃಢೀಕರಿಸಿಕೊಳ್ಳದೇ ಗಾಳಿ ಸುದ್ದಿ ಹರಡುವದರಿಂದ ಬಹಳಷ್ಟು ದುರಂತಗಳು ಸಂಭವಿಸುತ್ತಿದ್ದು ತಡೆಗಟ್ಟಬೇಕಾದ್ದು ಅತ್ಯವಶ್ಯವಾಗಿದೆ ಎಂದರು.

ಜನರಲ್ಲಿ ಗೊಂದಲ ನಿರ್ಮಿಸಿ ಸ್ವಸ್ಥತೆಗೆ ಹಾನಿ: ಬಿಬಿಎಂಪಿ ಸದಸ್ಯ ನಿತಿನ್‌ ಪುರುಷೋತ್ತಮ್‌ ಮಾತನಾಡಿ, ಸಮಾಜದಲ್ಲಿ ಶಾಂತಿಗೆ ಧಕ್ಕೆ ಉಂಟುಮಾಡುವ ಚಟುವಟಿಕೆಗಳನ್ನು ಅಪರಾಧವೆಂದು ಪರಿಗಣಿಸಬೇಕಾದ್ದು ಇಂಥ ಚಟುವಟಿಕೆಗಳನ್ನು ನಡೆಸುವವರ ವಿರುದ್ಧ ಮೊಕದ್ದಮೆ ದಾಖಲಿಸಬೇಕು. ಇಂದು ಬಹಳಷ್ಟು ಸಂದರ್ಭಗಳಲ್ಲಿ ಅನಾವಶ್ಯಕವಾಗಿ ಜನರಲ್ಲಿ ಗೊಂದಲ ನಿರ್ಮಿಸಿ ಸ್ವಸ್ಥತೆಗೆ ಹಾನಿಯುಂಟು ಮಾಡುವವರಿಗೆ ತಕ್ಕ ಪಾಠ ಕಲಿಸಬೇಕು ಎಂದರು. 

ಮದ್ಯಪಾನ ಸೇವೆನೆಯಿಂದ ಅಪಘಾತಗಳ ಪ್ರಮಾಣ ಹೆಚ್ಚಳ: ಸರ್ಕಲ್‌ ಇನ್‌ಸ್ಪೆಕ್ಟರ್‌ ಅಶ್ವಥ ನಾರಾಯಣಸ್ವಾಮಿ ಮಾತನಾಡಿ, ಪೊಲೀಸರೊಂದಿಗೆ ಸಾರ್ವಜನಿಕರ ಸಹಭಾಗಿತ್ವದ ಬಗ್ಗೆ ಅರಿವು ಮೂಡಿಸಲು ಇಂಥ ಕಾರ್ಯಕ್ರಮ
ಏರ್ಪಡಿಸಲಾಗುತ್ತಿದೆ. ಮಕ್ಕಳು ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಲು ಪೋಷಕರು ಸೂಕ್ತ ಮಾರ್ಗದರ್ಶನ ನೀಡಬೇಕು. ಯುವಕರು ಮದ್ಯಪಾನ, ಮಾದಕ ವಸ್ತುಗಳ ಸೇವನೆಯಂತಹ ದುಶ್ಚಟಗಳಿಗೆ ಒಳಗಾಗುತ್ತಿದ್ದು ಅಪಘಾತಗಳ ಪ್ರಮಾಣ ಹೆಚ್ಚಾಗಲು ಪ್ರಮುಖ ಕಾರಣವಾಗಿದೆ. ಮಾದಕ ವಸ್ತುಗಳ ಅಕ್ರಮ ಮಾರಾಟದಂಥ ಕೃತ್ಯಗಳು ಕಂಡುಬಂದಲ್ಲಿ ನಿರ್ಭೀತಿಯಿಂದ ಪೊಲೀಸರಿಗೆ ಮಾಹಿತಿ ನೀಡಬೇಕು. ಹೆಣ್ಣು ಮಕ್ಕಳ ಪೋಷಕರು ಮಕ್ಕಳ ಶಾಲಾ ಕಾಲೇಜುಗಳ ಹಾಜರಾತಿ ಬಗ್ಗೆ ಆಗಾಗ್ಗೆ ಮಾಹಿತಿ ಪಡೆಯುವ ಮೂಲಕ ಅಪಹರಣದಂತಹ ಕೃತ್ಯಗಳನ್ನು ತಡೆಗಟ್ಟಬಹುದಾಗಿದೆ ಎಂದರು. 

Advertisement

ಸೆಂಟರ್‌ ಫಾರ್‌ ಟ್ರೂತ್‌ ಮೆಸೇಜ್‌ ಸಂಸ್ಥೆ ಅಧ್ಯಕ್ಷ ನೂರುಲ್ಲಾ, ದಾವಣಗೆರೆಯ ಡಬ್ಲೂಟಿ ಸಂಸ್ಥೆ ಅಧ್ಯಕ್ಷ ಇಲಿಯಾಸ್‌ ಖಾನ್‌ ಮಾತನಾಡಿದರು. ನಗರಸಭೆ ಅಧ್ಯಕ್ಷ ಎನ್‌.ಟಿ.ಹೇಮಂತಕುಮಾರ್‌, ಸಬ್‌ಇನ್‌ಸ್ಪೆಕ್ಟರ್‌ ರಂಗಸ್ವಾಮಿ, ಸೈಯದ್‌ ಇಮ್ರಾನ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next