Advertisement

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

12:04 AM Dec 26, 2024 | Team Udayavani |

ಹೊಸದಿಲ್ಲಿ: ಹೊಸದಿಲ್ಲಿಯ ಕಾಶ್ಮೀರಿ ಗೇಟ್‌ನಲ್ಲಿರುವ ಆಟೋ ಮೊಬೈಲ್‌ ಬಿಡಿ ಭಾಗಗಳ ವ್ಯಾಪಾರಸ್ಥರು ಬಾಂಗ್ಲಾದೇಶದೊಂದಿಗೆ ವ್ಯಾಪಾರ, ವಹಿವಾಟು ನಡೆಸದಿರಲು ನಿರ್ಧರಿಸಿದ್ದಾರೆ.

Advertisement

ಆ ದೇಶದಲ್ಲಿ ಭಾರತ ವಿರೋಧಿ ಕೃತ್ಯಗಳು ಹಾಗೂ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾಕರ ಮೇಲಿನ ದಾಳಿ ಹೆಚ್ಚುತ್ತಲೇ ಇರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿಯೂ ಹೇಳಿದ್ದಾರೆ.

ವ್ಯಾಪಾರಿಗಳ ಒಕ್ಕೂಟದ ಅಧ್ಯಕ್ಷ ವಿನಯ್‌ ನಾರಂಗ್‌ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಜ. 5ರ ವರೆಗೆ ನಾವು ಸರಕು ರಫ್ತು ಮಾಡದಿದ್ದರೆ ಬಾಂಗ್ಲಾಗೆ ಬಹುದೊಡ್ಡ ಹೊಡೆತ ಬೀಳಲಿದೆ ಎಂದು ಒಕ್ಕೂಟದ ಅಧ್ಯಕ್ಷ ಎಚ್ಚರಿಕೆ ನೀಡಿದ್ದಾರೆ. ಕಾಶ್ಮೀರಿ ಗೇಟ್‌ನಲ್ಲಿ 2,000ಕ್ಕೂ ಅಧಿಕ ಆಟೋ ಮೊಬೈಲ್‌ ಬಿಡಿ ಭಾಗಗಳನ್ನು ಮಾರಾಟ ಮಾಡುವ ಶಾಪ್‌ಗ್ಳಿವೆ.

Advertisement

Udayavani is now on Telegram. Click here to join our channel and stay updated with the latest news.

Next