Advertisement

Bantwal ಆಟೋ ರಿಕ್ಷಾಕ್ಕೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10:23 PM Mar 06, 2024 | Team Udayavani |

ಬಂಟ್ವಾಳ: ಸಜೀಪಮೂಡ ಗ್ರಾಮದ ಬೇಂಕ್ಯದಲ್ಲಿ ಕಾರೊಂದು ಓವರ್‌ಟೇಕ್‌ ಮಾಡುವ ಭರದಲ್ಲಿ ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದು ಆಟೋ ಚಾಲಕ ಸಹಿತ ಇಬ್ಬರು ಗಾಯಗೊಂಡ ಘಟನೆ ಮಾ. 5ರಂದು ನಡೆದಿದೆ.

Advertisement

ಘಟನೆಯಲ್ಲಿ ಆಟೋ ಚಾಲಕ ಅಬ್ಟಾಸ್‌, ಪ್ರಯಾಣಿಕೆ ಜುಬೈದಾ ಅವರು ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಕಾರು ಚಾಲಕ ಸಮೀರ್‌ ಓವರ್‌ಟೇಕ್‌ ಮಾಡುವ ವೇಳೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next