Advertisement
ಅವಘಡದಲ್ಲಿ 35ಕ್ಕೂ ಹೆಚ್ಚು ಆಟೋಗಳು, 50 ಲಕ್ಷ ರೂ. ಮೌಲ್ಯದ ಪ್ಲಾಸ್ಟಿಕ್ ವಸ್ತುಗಳು ಸುಟ್ಟು ಹೋಗಿವೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಗ್ನಿಶಾಮಕ ದಳ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
Related Articles
Advertisement
ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡು ಆಟೋ ಸ್ಟಾಂಡ್‌ಗೆ ಬೆಂಕಿ ಕೆನ್ನಾಲಿಗೆ ವ್ಯಾಪಿಸಿದೆ ಎಂದು ಹೇಳಲಾಗಿದೆ. ಸ್ಟಾಂಡ್‌ನಲ್ಲಿ ನಿಲುಗಡೆ ಮಾಡಿದ್ದ ಆಟೋಗಳ ಸಿಲಿಂಡರ್ ಸ್ಫೋಟಿಸಿದ ಪರಿಣಾಮ ಬೆಂಕಿಯ ತೀವ್ರತೆ ಹೆಚ್ಚಾಗಿದೆ ಎಂದು ಹೇಳಲಾಗಿದೆ. ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಸದ್ಯ ಬೆಂಕಿ ಅವಘಡದಿಂದ ಘಟನೆ ನಡೆದಿದೆ ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀ ಸರು ಮಾಹಿತಿ ನೀಡಿದರು. ಈ ಬಗ್ಗೆ ಚಂದ್ರಾ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಶಾಸಕ ಕೃಷ್ಣಪ್ಪ ಭೇಟಿ: ಮನೆ ಮುಂಭಾಗ ನಿಲುಗಡೆ ಮಾಡಲು ಜಾಗದ ಕೊರತೆಯಿಂದಾಗಿ ಕೆಲ ಆಟೋ ಚಾಲಕರು, ದಿನಕ್ಕೆ 30 ರೂ. ಬಾಡಿಗೆಯಂತೆ ತಿಂಗಳಿಗೆ 900 ರೂ. ಬಾಡಿಗೆ ನೀಡಿ ಆಟೋ ಸ್ಟಾಂಡ್‌ನಲ್ಲಿ ಆಟೋಗಳನ್ನು ಚಾಲಕರು ನಿಲ್ಲಿಸುತ್ತಿದ್ದರು. ಜತೆಗೆ ಗುಜರಿಗೆ ಸೇರುವ ಆಟೋಗಳು ಈ ಆವರಣದಲ್ಲಿದ್ದವು. ಇದರೊಂದಿಗೆ ಟಾಟಾ ಏಸ್ ವಾಹನಗಳನ್ನು ನಿಲುಗಡೆ ಮಾಡಲಾಗುತ್ತಿತ್ತು ಎಂಬುದು ಗೊತ್ತಾಗಿದೆ.
ಇನ್ನು ಘಟನಾ ಸ್ಥಳಕ್ಕೆ ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಭೇಟಿ ಕೊಟ್ಟು ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಂತ್ರಸ್ತರಿಗೆ ನೆರವಾಗುವ ಭರವಸೆ ನೀಡಿದರು.