ನಿಗಮದ ಮಾಜಿ ಅಧ್ಯಕ್ಷ ಹಾಗೂ ವಕ್ತಾರ ಮುರಳೀಧರ ಹಾಲಪ್ಪ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
Advertisement
ಆಟೋ, ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್ ಚಾಲಕರು ಮತ್ತು ಮಾಲೀಕರ ಕುಂದುಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಬಗೆ ಹರಿಸಬೇಕೆಂದು ಒತ್ತಾಯಿಸಿ ಬುಧವಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು.ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಆಗ್ರಹ: ರಾಜ್ಯ ಸರ್ಕಾರ ಚಾಲಕರಿಗೆ ಘೋಷಣೆ ಮಾಡಿರುವ 5000 ರೂ.ಗಳ ಪರಿಹಾರದಲ್ಲಿ ಕೇವಲ 1.20 ಲಕ್ಷ ಚಾಲಕರಿಗೆ ಮಾತ್ರ ಸಿಕ್ಕಿದ್ದು, ಇನ್ನೂ 1.30 ಲಕ್ಷ ಮಂದಿಗೆ ಪರಿಹಾರ ಸಿಗಬೇಕಿದೆ. ಶೀಘ್ರವಾಗಿ ಎಲ್ಲಾ ಚಾಲಕರ ಖಾತೆಗೆ ಸಹಾಯಧನ ಬರುವಂತೆ ಕ್ರಮ ಕೈಗೊಳ್ಳಬೇ ಕೆಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳನ್ನು ಒತ್ತಾಯಿಸಿದರು.
ನೀಡಿದ್ದು, ಇನ್ನೂ 1.30 ಲಕ್ಷ ಚಾಲಕರಿಗೆ ಸಹಾಯಧನ ಸಿಗಬೇಕಿದೆ. ಅವರಿಗೆ ಚಾಲನ ಪರವಾನಗಿಯಲ್ಲಿ ಸಮಸ್ಯೆಗಳಿದ್ದರೆ ಅಂತಹವರಿಗೆ ಶೀಘ್ರವಾಗಿ ಸಮಸ್ಯೆ ಬಗೆಹರಿಸಿ ಪರಿಹಾರಧನ ಸಿಗುವಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿದ ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಜು ಮಾತನಾಡಿ, ನಿಮ್ಮ ಮನವಿಯನ್ನು ಮೇಲಧಿಕಾರಿಗಳಿಗೆ ಕಳುಹಿಸಿಕೊಟ್ಟು ಶೀಘ್ರ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.