ಕಣ್ಣೂರು: ಸಿಎನ್ ಜಿ ಚಾಲಿತ ಆಟೋ ರಿಕ್ಷಾ ಡಿಕ್ಕಿ ಹೊಡೆದ ಸಂದರ್ಭದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಚಾಲಕ ಸೇರಿದಂತೆ ಇಬ್ಬರು ಜೀವಂತವಾಗಿ ದಹನವಾಗಿರುವ ಘಟನೆ ಕಣ್ಣೂರಿನ ಕಥಿರೂರ್ ಎಂಬಲ್ಲಿ ಶುಕ್ರವಾರ (ಅಕ್ಟೋಬರ್ 14) ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:Kittur Chennamma: ಚದುರಿದ ಚಿತ್ರಗಳಂತಾದ ಕಿತ್ತೂರು ರಾಣಿ ಚನ್ನಮ್ಮ ವಂಶಸ್ಥರು
ಸಿಎನ್ ಜಿ ಚಾಲಿತ ಆಟೋ ರಿಕ್ಷಾ ಖಾಸಗಿ ಬಸ್ ವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಚಾಲಕ ಅಭಿಲಾಷ್ (37ವರ್ಷ) ಮತ್ತು ಅವರ ಗೆಳೆಯ ಶೈಜೇಶ್ (36ವರ್ಷ) ಜೀವಂತವಾಗಿ ಸುಟ್ಟು ಹೋಗಿರುವುದಾಗಿ ವರದಿ ತಿಳಿಸಿದೆ.
ಡಿಕ್ಕಿ ಹೊಡೆದ ವೇಳೆ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡಿರುವುದಾಗಿ ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ಮಾಹಿತಿ ನೀಡಿರುವುದಾಗಿ ವರದಿ ವಿವರಿಸಿದೆ. ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ ಸ್ಥಳೀಯರಿಗೆ ಆಟೋ ರಿಕ್ಷಾದ ಬಳಿ ತೆರಳಲು ಸಾಧ್ಯವಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆ ನಡೆದ ನಂತರ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರು. ಕೆಲ ಕಾಲದ ಬಳಿಕ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಆರಿಸಿತ್ತು. ಇಬ್ಬರ ಶವವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.