Advertisement

Avatara Purusha-2: ಮತ್ತೆ ಹೊಸ ಅವತಾರದಲ್ಲಿ ಶರಣ್‌ ಆಗಮನ

02:34 PM Apr 03, 2024 | Team Udayavani |

ಸಾಮಾನ್ಯವಾಗಿ ಸಿನಿಮಾ ರಿಲೀಸ್‌ಗಿಂತ 10-15 ದಿನ ಮುಂಚೆ ಟ್ರೇಲರ್‌ ಬಿಡುಗಡೆ ಮಾಡುವುದು ವಾಡಿಕೆ. ಆದರೆ, “ಅವತಾರ ಪುರುಷ-2′ ಚಿತ್ರತಂಡ ಸಿನಿಮಾ ರಿಲೀಸ್‌ಗೆ 4 ದಿನ ಮುಂಚೆ ರಿಲೀಸ್‌ ಮಾಡಿ ಖುಷಿಪಟ್ಟಿದೆ.

Advertisement

ಇತ್ತೀಚೆಗೆ ನಡೆದ ಟ್ರೇಲರ್‌ ಬಿಡುಗಡೆ ಕಾರ್ಯಕ್ರಮದಲ್ಲಿ ನಟರಾದ ಪ್ರೇಮ್‌, ರಿಷಿ, ವಿಕ್ಕಿ ವರುಣ್‌, ಪ್ರವೀಣ್‌ ತೇಜ್‌ ಹಾಗೂ ನಿರ್ದೇಶಕ ಸಂತು ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ನಿರ್ದೇಶಕ ಸಿಂಪಲ್‌ ಸುನಿ ಮಾತನಾಡಿ, “ಅವತಾರ ಪುರುಷ ಮೊದಲ ಭಾಗವನ್ನು ಚಿತ್ರಮಂದಿರ, ಓಟಿಟಿ ಹಾಗೂ ಖಾಸಗಿ ವಾಹಿನಿಯಲ್ಲಿ ಸಾಕಷ್ಟು ಜನರು ವೀಕ್ಷಿಸಿದ್ದಾರೆ. ಅದೇ ರೀತಿಈ ಚಿತ್ರದ ಎರಡನೇ ಭಾಗವನ್ನು ನೋಡಿ ಯಶಸ್ವಿಗೊಳಿಸಿ. ಮೊದಲ ಭಾಗವನ್ನು ನೋಡಿದವರಿಗೆ ಹಾಗೂ ನೋಡದವರಿಗೆ ಇಬ್ಬರಿಗೂ ಭಾಗ-2 ಅರ್ಥವಾಗುತ್ತದೆ’ ಎಂದರು.

“ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್‌ ಚಿತ್ರಗಳನ್ನು ನೀಡಿರುವ ನಿರ್ದೇಶಕ ಸುನಿ ಅವರ ಜೊತೆ ಕೆಲಸ ಮಾಡಿದ್ದು ಖುಷಿಯಾಗಿದೆ. ಸುನಿ ಅವರು ಚಿತ್ರದ ಕಥೆ ಹೇಳುತ್ತೇನೆ ಎಂದಾಗ ಕಾಮಿಡಿ ಜಾನರ್‌ನ ಕಥೆ ಅಂದುಕೊಂಡಿದ್ದೆ. ಆದರೆ ಅವರು ಇದೊಂದು ವಿಭಿನ್ನ ಕಥೆ. ಈ ಕಥೆಯಲ್ಲಿ ಕಾಮಿಡಿ ಕೂಡ ಇರುತ್ತದೆ ಎಂದರು.

ನನಗೂ ಬೇರೆ ಬೇರೆ ತರಹದ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ಆಸೆ. ಹಾಗಾಗಿ ಈ ಚಿತ್ರದ ಪಾತ್ರ ಇಷ್ಟವಾಯಿತು. ಚಿತ್ರ ತಾಂತ್ರಿಕವಾಗಿ ಶ್ರೀಮಂತವಾಗಿ ಮೂಡಿಬಂದಿದೆ’ ಎನ್ನುವುದು ನಟ ಶರಣ್‌ ಮಾತು.

Advertisement

“ನಾನು ಬೇರೆ ಭಾಷೆಗಳ ಚಿತ್ರಗಳಲ್ಲಿ ನಟಿಸುತ್ತಿದ್ದಾಗ “ಅವತಾರ ಪುರುಷ-2′ ಚಿತ್ರ ಯಾವಾಗ ಬಿಡುಗಡೆ ಎಂದು ಕೇಳುತ್ತಿದ್ದರು. ಜನರಿಗೆ ಈ ಚಿತ್ರದ ಬಗ್ಗೆ ಅಷ್ಟು ಕುತೂಹಲವಿದೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿದೆ’ ಎಂದರು ನಾಯಕಿ ಆಶಿಕಾ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next