Advertisement

ಮಾದಕ ವಸ್ತುಗಳ ವ್ಯಸನದಿಂದ ದೂರವಿರಿ

05:43 PM Dec 21, 2017 | |

ಭದ್ರಾವತಿ: ಯುವ ಸಮುದಾಯ ಮದ್ಯ, ಮಾದಕ ವಸ್ತುಗಳ ಸೇವನೆಯಿಂದ ದೂರವಿರಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್‌.ಬಿ. ಧರ್ಮಗೌಡರ ಹೇಳಿದರು.

Advertisement

ನ್ಯೂಟೌನ್‌ ಸರ್‌.ಎಂ.ವಿ. ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ, ಶ್ರೀ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,
ಭದ್ರಾವತಿ ವಕೀಲರ ಸಂಘ ಸಂಯುಕ್ತವಾಗಿ ಬುಧವಾರ ಏರ್ಪಡಿಸಿದ್ದ ವ್ಯಸನ ಮುಕ್ತ ಸಮಾಜಕ್ಕಾಗಿ ಜನಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆಫ್ಘಾನಿಸ್ತಾನ ಸೇರಿದಂತೆ ಭಾರತದ ಕೆಲವು ನೆರೆ ರಾಷ್ಟ್ರಗಳು ಭಾರತಕ್ಕೆ ಅಕ್ರಮವಾಗಿ ಮಾದಕ ವಸ್ತುಗಳನ್ನು ರವಾನಿಸುವ ಕೆಲಸ ಮಾಡುತ್ತಿವೆ. ಇವಗಳ ಸೇವನೆಯಿಂದ ಇಲ್ಲಿನ ಯುವ ಸಮೂಹ ಮಾದಕ
ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ. ಮಾದಕ ವಸ್ತುಗಳ ವ್ಯಸನಕ್ಕೆ ಸಿಲುಕಿದ ವ್ಯಕ್ತಿಯ ಬದುಕು ಅಧಃಪತನದತ್ತ ಸಾಗುತ್ತದೆ ಎಂದರು.

ಸಮಾಜದ ಸ್ವಾಸ್ಥ್ಯ ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿರುವುದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು. ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಅರಿವಿರದ ಹಲವು ರೈತರು ತಮ್ಮ ಹೊಲಗಳಲ್ಲಿ ಗಾಂಜಾ ಬೆಳೆಯುತ್ತಿದ್ದಾರೆ. ಅವರಿಗೆ ಇದರ ದುಷ್ಪರಿಣಾಮ
ಕುರಿತಂತೆ ತಿಳಿವಳಿಕೆ ನೀಡಿ ಗಾಂಜಾ ಬೆಳೆಯದಂತೆ ಅವರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ 4ನೇ ಹೆಚ್ಚುವರಿ ಜಿಲ್ಲಾ ನತ್ತು ಸತ್ರ ನ್ಯಾಯಾಧೀಶ ಜಿ.ಎಸ್‌. ರೇವಣಕರ್‌, ಮಾದಕ ವಸ್ತು ಸೇವನೆಯ ವ್ಯಸನಿಗಳನ್ನು ಸಮಾಜ ಗೌರವಿಸುವುದಿಲ್ಲ. ವ್ಯಸನಕ್ಕೆ ಬಲಿಯಾದ ವ್ಯಕ್ತಿಗಳ ಜೀವನ ಎಂದಿಗೂ
ಉದ್ಧಾರವಾಗುವುದಿಲ್ಲ ಎಂಬ ಸತ್ಯವನ್ನು ಅರಿತು ವ್ಯಸನ ಮುಕ್ತ ಜೀವನ ನಡೆಸಲು ಮುಂದಾಗಬೇಕು ಎಂದರು. ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ನಿರ್ದೇಶಕ ವಿವೇಕ್‌ ವಿನ್ಸೆಂಟ್‌ ಪಾಯಸ್‌ ಮಾತನಾಡಿದರು.

ನ್ಯಾಯಾಧಿಧೀಶರಾದ ಸೋಮಶೇಖರ್‌,ಅನುಪಮಾ ಲಕ್ಷ್ಮೀ, ಗಣೇಶ್‌ ಪಡಿಯಾರ್‌, ವಕೀಲರ ಸಂಘದ ಅಧ್ಯಕ್ಷ ಚಂದ್ರೇಗೌಡ, ಹಾಲಸಿದ್ದಪ್ಪ, ನಗರಸಭಾ ಸದಸ್ಯ ಆನಂದಕುಮಾರ್‌, ಪ್ರಾಂಶುಪಾಲೆ ಶೈಲಜಾ ಹೊಸಳಾರ್‌, ಉದಯ್‌ ಶೆಟ್ಟಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next