Advertisement

Dowry Act: ವರದಕ್ಷಿಣೆ ಕಾಯ್ದೆ ದುರ್ಬಳಕೆ ತಪ್ಪಿಸಿ: ಸುಪ್ರೀಂ ತಾಕೀತು

11:18 PM Dec 11, 2024 | Team Udayavani |

ನವದೆಹಲಿ: ಗಂಡನ ಮನೆಯಲ್ಲಿ ಮಹಿಳೆಗೆ ರಕ್ಷಣೆ ಒದಗಿಸುವ ಸೆಕ್ಷನ್‌ 498 ಎ ದುರ್ಬಳಕೆ ಹೆಚ್ಚಾಗುತ್ತಿದೆ ಎಂದು ಸುಪ್ರೀಂಕೋರ್ಟ್‌ ಕಳವಳ ವ್ಯಕ್ತಪಡಿಸಿದೆ. ಅಲ್ಲದೆ ಅಮಾಯಕರು ಅದಕ್ಕೆ ಬಲಿಯಾಗದಂತೆ ಎಚ್ಚರ ವಹಿಸಬೇಕು ಎಂದು ಹೇಳಿದೆ.

Advertisement

ಪತ್ನಿ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರಿನ ಅತುಲ್‌ ಸುಭಾಷ್‌ ಪ್ರಕರಣದ ಬೆನ್ನಲ್ಲೇ ಸುಪ್ರೀಂ­ಕೋರ್ಟ್‌ ಈ ಆದೇಶ ನೀಡಿದೆ. ತೆಲಂ­ಗಾಣದಲ್ಲಿ ವ್ಯಕ್ತಿಯೊಬ್ಬರ ಮೇಲೆ ವಿಧಿಸ­ಲಾಗಿದ್ದ ವರದಕ್ಷಿಣೆ ಕಿರುಕುಳ ಪ್ರಕರಣ­ವನ್ನು ರದ್ದು ಮಾಡಲಾಗುವುದಿಲ್ಲ ಎಂದು ಹೈಕೋರ್ಟ್‌ ಹೇಳಿತ್ತು. ಇದರ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬಿ.ವಿ.ನಾಗರತ್ನ ಅವರಿದ್ದ ಪೀಠ, ಮಹಿಳೆಯ ಆರೋಪದಲ್ಲಿ ಸ್ಪಷ್ಟತೆಯಿಲ್ಲ ಎಂದು ಹೇಳಿ ಹೈಕೋರ್ಟ್‌ ಆದೇಶ ರದ್ದು ಮಾಡಿದೆ.

ಕೋರ್ಟ್‌ ಹೇಳಿದ್ದೇನು?: ಕೌಟುಂಬಿಕ ದೌರ್ಜನ್ಯ ಮತ್ತು ಕಿರುಕುಳದಿಂದ ಮಹಿಳೆಯನ್ನು ರಕ್ಷಿಸುವ ಗುರಿ ಹೊಂದಿದ್ದ ಈ ಸೆಕ್ಷನ್‌ ಅನ್ನು ದುರ್ಬಳಕೆ ಮಾಡಿಕೊಳ್ಳುವ ಪ್ರಕರಣಗಳು ಹೆಚ್ಚುತ್ತಿವೆ. ಅಸ­ಮಂಜಸ ಬೇಡಿಕೆ ಈಡೇರಿಸಿಕೊಳ್ಳುವು­ದಕ್ಕಾಗಿ ಪತ್ನಿ ಈ ಕಾನೂನನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾಳೆ ಎಂದು ಸುಪ್ರೀಂ ಕೋರ್ಟ್‌ ನ್ಯಾಯಪೀಠ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next