Advertisement

ಮತದಾರರಿಗೆ ಜಾಗೃತಿ ಮೂಡಿಸಿ: ಜಗದೇವಪ್ಪ

10:40 AM Mar 15, 2019 | Team Udayavani |

ಸುರಪುರ: ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಮತದಾರರಲ್ಲಿ ಜಾಗೃತಿ ಮೂಡಿಸಬೇಕು. ಶಾಲಾ-ಕಾಲೇಜುಗಳ ಶಿಕ್ಷಕರು ಚುನಾವಣಾ ಸಾಕ್ಷರತಾ ಕ್ಲಬ್‌ ಮೂಲಕ ಮಕ್ಕಳ ಪಾಲಕರು-ಪೋಷಕರು ಕಡ್ಡಾಯವಾಗಿ ಮತದಾನದಲ್ಲಿ
ಪಾಲ್ಗೊಳ್ಳಲು ತಿಳಿಸಬೇಕು ಎಂದು ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಬಿ. ಜಗದೇವಪ್ಪ ಸಲಹೆ ನೀಡಿದರು.

Advertisement

ರಂಗಂಪೇಟೆಯ ಸರ್ಕಾರಿ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ತಾಲೂಕಿನ ಶಾಲಾ-ಕಾಲೇಜುಗಳಲ್ಲಿ
ಸ್ಥಾಪಿಸಲಾದ ಚುನಾವಣಾ ಸಾಕ್ಷರತಾ ಕ್ಲಬ್‌ ಸಂಚಾಲಕರ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ತದಾನ ಸಂವಿಧಾನಿಕ ಹಕ್ಕು, ದೇಶದ ಪ್ರಗತಿ ಮತ್ತು ಅಭಿವೃದ್ಧಿಗಾಗಿ ಪ್ರತಿಯೊಬ್ಬರು ತಪ್ಪದೇ ಮತ ಚಲಾಯಿಸಬೇಕು. ಆಶೆ ಆಮಿಶಗಳಿಗೆ ಒಳಗಾಗದೆ ಉತ್ತಮ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಮತದಾನ ನಿಮ್ಮ ಅಸ್ತ್ರ. ಇದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ಮತದಾರರು ಮತಗಟ್ಟೆಗೆ ತೆರಳಿ ದೇಶದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಹೇಳಿದರು.
 
ನಮ್ಮ ಭಾಗದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿರುತ್ತದೆ. ಆದರೆ ಲೋಕಸಭಾ ಚುನಾವಣೆಯಲ್ಲಿ
ಮತದಾನ ಪ್ರಮಾಣ ಕಡಿಮೆ ಇರುವುದು ಕಂಡು ಬಂದಿದ್ದು, ಇದನ್ನು ಮನಗಂಡು ಭಾರತ ಚುನಾವಣಾ ಆಯೋಗ ಶಾಲಾ-ಕಾಲೇಜುಗಳಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್‌ ಸ್ಥಾಪಿಸಿ ಮಕ್ಕಳಿಗೆ ಈ ಕುರಿತು ಅರಿವು ಮೂಡಿಸಿ ಮಕ್ಕಳ ಪಾಲಕರು ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳುವಂತೆ ಶಿಕ್ಷಕರು ಪ್ರೇರೆಪಿಸಬೇಕು ಎಂದು ತಿಳಿಸಿದರು.

ನೋಡಲ್‌ ಅಧಿಕಾರಿ ಅಮರೇಶ ಕುಂಬಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ತಹಶೀಲ್ದಾರ್‌ ಸುರೇಶ ಅಂಕಲಗಿ, ಬಿಇಒ ನಾಗರತ್ನಾ ಓಲೇಕಾರ, ಕಾಲೇಜಿನ ಪ್ರಾಂಶುಪಾಲ ಬಸವರಾಜ ಕೊಡೇಕಲ್‌, ಉಪ ಪ್ರಾಂಶುಪಾಲ ಗುರುಲಿಂಗಪ್ಪ
ಖಾನಾಪುರ, ಬಿಆರ್‌ಪಿ ಖಾದರ ಪಟೇಲ, ಸಿಆರ್‌ಪಿ ಸೇವಾ ನಾಯಕ ಇದ್ದರು. ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳ 60 ಶಿಕ್ಷಕರು ಭಾಗವಹಿಸಿದ್ದರು. ಸಾಹೇಬಗೌಡ ಬಿರಾದರ ನಿರೂಪಿಸಿದರು. ಶ್ರೀನಿವಾಸ ಕುಲಕರ್ಣಿ ಸ್ವಾಗತಿಸಿದರು. ಶಿವಶರಣಯ್ಯ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next