Advertisement

‘ಬಾಲ್ಯ ವಿವಾಹ ನಿರ್ಮೂಲನೆ ಹಾಡಿಗಳಲ್ಲಿ ಜಾಗೃತಿ ಮೂಡಿಸಿ’

10:19 AM May 10, 2019 | Suhan S |

ಮಡಿಕೇರಿ ಮೇ 9 :ಬಾಲ್ಯ ವಿವಾಹ ಪಿಡುಗು ತಡೆಯುವಲ್ಲಿ ಜಿಲ್ಲೆಯ ಎಲ್ಲ ಗಿರಿಜನ ಹಾಡಿಗಳಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಸೂಚನೆ ನೀಡಿದ್ದಾರೆ.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗ ಣದಲ್ಲಿ ಬಾಲ್ಯ ವಿವಾಹ ತಡೆಯುವಲ್ಲಿ ನಿರ್ವಸಬೇಕಾದ ಕ್ರಮಗಳ ಬಗ್ಗೆ ಬುಧವಾರ ನಡೆದ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಮಹಿಳಾ ಗ್ರಾಮ ಸಭೆಗಳನ್ನು ನಡೆಸಿ ಜಾಗೃತಿ ಮೂಡಿಸಬೇಕು. ಅಂಗನವಾಡಿ ಮೇಲ್ವಿಚಾರಕರು ಮತ್ತು ಆಶಾ ಕಾರ್ಯಕರ್ತರು ಬಾಲ್ಯ ವಿವಾಹ ತಡೆ ಯುವ ಬಗ್ಗೆ ಜಾಗೃತಿ ಮೂಡಿಸುವಂತೆ ಅವರು ತಿಳಿಸಿದರು.

ಬಾಲ್ಯ ವಿವಾಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್ಐಆರ್‌ ದಾಖಲು ಮಾಡುವುದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಈ ಬಗ್ಗೆ ಮಾತನಾಡಿದ ವಕೀಲರಾದ ಮೀನಾಕುಮಾರಿ ಅವರು ಎಫ್ಐಆರ್‌ ದಾಖಲಿಸಿದ್ದಲ್ಲಿ ನ್ಯಾಯಾಲಯಕ್ಕೆ ಹಾಜ ರಾಗಿ ಮಾಹಿತಿ ನೀಡಬೇಕಿದೆ. ಇದರಿಂದಾಗಿ ಯಾರೂ ಸಹ ಎಫ್ಐಆರ್‌ ದಾಖಲಿಸಲು ಮುಂದೆ ಬರುತ್ತಿಲ್ಲ ಎಂದು ಅವರು ಅತೃಪ್ತಿ ವ್ಯಕ್ತಪಡಿಸಿದರು.

Advertisement

ಬಾಲ್ಯ ವಿವಾಹ ತಡೆಯುವಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು ಹಾಗೂ ಸಮುದಾಯದ ಪ್ರತಿನಿಧಿಗಳ ವಿಶ್ವಾಸ ಪಡೆದು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಪ್ರತಿಯೊಬ್ಬರೂ ಶಿಕ್ಷಣ ಪಡೆದಾಗ ಜಾಗೃತಿ ಹೊಂದಲು ಸಾಧ್ಯ. ಆ ನಿಟ್ಟಿನಲ್ಲಿ ಹಾಡಿಯ ಮಕ್ಕಳು 5ನೇ ತರಗತಿಯಿಂದಲೇ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಮ್ತಾಜ್‌ ಅವರು ಬಾಲ್ಯ ವಿವಾಹ ತಡೆಯುವಲ್ಲಿ ಶಾಲಾ-ಕಾಲೇಜುಗಳಲ್ಲಿ ಅರಿವು ಮೂಡಿಸಲಾಗುತ್ತದೆ ಎಂದು ಅವರು ಹೇಳಿದರು.

ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಅವರು ಬಾಲ್ಯ ವಿವಾಹ ತಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಕೌಟುಂಬಿಕ ದೌರ್ಜನ್ಯ ಆಗದಂತೆ ಜಾಗೃತಿ ಮೂಡಿಸಬೇಕು. ಮಾತೃವಂದನಾ ಯೋಜನೆ ಅನುಷ್ಠಾನದಲ್ಲಿ ಗಮನಹರಿ ಸುವಂತೆ ಅವರು ಸೂಚಿಸಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಮನ್‌ ಡಿ.ಪೆನ್ನೇಕರ್‌, ಸಿಡಿಪಿಒ ಸೀತಾಲಕ್ಷ್ಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಇಲಾಖೆಯ ಆರ್‌ಸಿಎಚ್ ಅಧಿಕಾರಿ ಡಾ| ಆನಂದ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಚ್ಚಾಡೋ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಭಾರತಿ, ಪೌರಾಯುಕ್ತರಾದ ಎಂ.ಎಲ್.ರಮೇಶ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next