Advertisement

ಅವಂತಿಪೋರಾ ಎನ್ ಕೌಂಟರ್: ಯೋಧ, ಪೊಲೀಸ್ ಅಧಿಕಾರಿ ಹುತಾತ್ಮ-ಪ್ರತಿದಾಳಿಗೆ ಉಗ್ರ ಬಲಿ

10:14 AM Jan 22, 2020 | Team Udayavani |

ನವದೆಹಲಿ: ಭಾರತೀಯ ಸೇನಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಜಮ್ಮು-ಕಾಶ್ಮೀರ್ ಪೊಲೀಸ್ ಅಧಿಕಾರಿ ಹಾಗೂ ಸೇನಾ ಯೋಧ ಸೇರಿದಂತೆ ಇಬ್ಬರು ಹುತಾತ್ಮರಾಗಿದ್ದು, ಪ್ರತಿದಾಳಿಯಲ್ಲಿ ಉಗ್ರನೊಬ್ಬ ಬಲಿಯಾಗಿರುವ ಘಟನೆ ಪುಲ್ವಾಮಾದ ಅವಂತಿಪೋರಾದಲ್ಲಿ ಮಂಗಳವಾರ ನಡೆದಿದೆ ಎಂದು ವರದಿ ತಿಳಿಸಿದೆ.

Advertisement

ಪ್ರಾಥಮಿಕ ವರದಿಗಳ ಪ್ರಕಾರ, ಅವಂತಿಪೋರಾದ ಸಾಟ್ ಪೋಖ್ರಾನ್ ಖ್ರೇವ್ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಎನ್ ಕೌಂಟರ್ ನಡೆದಿರುವುದಾಗಿ ತಿಳಿಸಿದೆ.

ಅವಂತಿಪೋರಾ ಪ್ರದೇಶದಲ್ಲಿ 2-3 ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿದ್ದವು. ಈ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಪೊಲೀಸ್ ಮತ್ತು ಯೋಧ ಹುತಾತ್ಮರಾಗಿದ್ದು, ಪ್ರತಿದಾಳಿಯಲ್ಲಿ ಉಗ್ರನೊಬ್ಬ ಸಾವನ್ನಪ್ಪಿದ್ದಾನೆ. ಈತನ ಗುರುತು ಇನ್ನಷ್ಟೇ ಪತ್ತೆಹಚ್ಚಬೇಕಾಗಿದೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next