ನವಿ ಮುಂಬಯಿ, ಜು. 27: ನಗರದ ಪ್ರತಿಷ್ಠಿತ ಬೋಂಬೆ ಬಂಟ್ಸ್ ಅಸೋಸಿಯೇಶನ್ ಶಿಕ್ಷಣ ಸಮಿತಿಯ ವತಿಯಿಂದ 2019-2020ನೇ ವಾರ್ಷಿಕ ಶೈಕ್ಷಣಿಕ ನೆರವು ವಿತರಣೆ ಕಾರ್ಯಕ್ರಮವು ಜು. 21ರಂದು ಪೂರ್ವಾಹ್ನ 10.30ರಿಂದ ಜೂಯಿನಗರ ಪಶ್ಚಿಮದ ಗಾಂವ್ದೇವಿ ಚೌಕ್ ಸಮೀಪದ ಪ್ಲಾಟ್ ನಂಬರ್ 42, ಬಂಟ್ಸ್ ಸೆಂಟರ್‌ನ ಶಶಿಕಲಾ ಮನ್‌ಮೋಹನ್ ಶೆಟ್ಟಿ ಕಾಂಪ್ಲೆಕ್ಸ್‌ನ ಸೌಮ್ಯಲತಾ ಸದಾನಂದ ಶೆಟ್ಟಿ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ಬೋಂಬೆ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ನ್ಯಾಯವಾದಿ ಸುಭಾಷ್ ಬಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಉಪಾಧ್ಯಕ್ಷ ಮುರಳಿ ಕೆ. ಶೆಟ್ಟಿ ಮತ್ತು ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷೆ ಸರಳಾ ಬಿ. ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನೀಯ ಸಾಧನೆಗೈದ ಸಾಧಕರು ಮತ್ತು ದಾನಿಗಳಾದ ಬೋಂಬೆ ಬಂಟ್ಸ್ ಅಸೋಸಿಯೇಶನ್ ವಿಶ್ವಸ್ತ ರಘುರಾಮ ಕೆ. ಶೆಟ್ಟಿ, ಫೆಸ್ಟ್ ಮೋರ್ಟಂ ಪ್ರೈವೇಟ್ ಲಿಮಿಟೆಡ್ ಇದರ ಸಿಎಂಡಿ ಜಯರಾಮ ಪಿ. ಶೆಟ್ಟಿ, ಭಾರತ್ ಕೋಚ್ ಬಿಲ್ಡರ್‌ನ ಸದಾಶಿವ ಎಸ್. ಶೆಟ್ಟಿ ಇವರನ್ನು ಗಣ್ಯರ ಸಮ್ಮುಖದಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆ ಮತ್ತು ಸಮ್ಮಾನ ಪತ್ರವನ್ನಿತ್ತು ಸಮ್ಮಾನಿಸಿ ಗೌರವಿಸಲಾಯಿತು. ಸಮ್ಮಾನಿತರು ಮಾತನಾಡಿ ಸಂಸ್ಥೆಯ ಸಿದ್ಧಿ-ಸಾಧನೆಗಳನ್ನು ವಿವರಿಸಿ ಕೃತಜ್ಞತೆ ಸಲ್ಲಿಸಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಜಾಸ್ಮಿನ್ ಗ್ರೂಪ್ ಆಫ್ ಕಂಪೆನಿಯ ಸಿಎಂಡಿ ಡಾ| ಸುರೇಂದ್ರ ವಿ. ಶೆಟ್ಟಿ, ಗೌರವ ಅತಿಥಿಗಳಾಗಿ ಬಂಟರ ಸಂಘ ಮುಂಬಯಿ ಮಾಜಿ ಅಧ್ಯಕ್ಷ ಸುಧಾಕರ ಎಸ್. ಹೆಗ್ಡೆ, ಹೊಟೇಲ್ ಕೃಷ್ಣ ಪ್ಯಾಲೇಸ್‌ನ ಸಿಎಂಡಿ ಕೃಷ್ಣ ವೈ. ಶೆಟ್ಟಿ, ಉದ್ಯಮಿ ಶಿವರಾಮ ಶೆಟ್ಟಿ, ಬೋಂಬೆ ಬಂಟ್ಸ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ ಜಯ ಕೆ. ಶೆಟ್ಟಿ, ಬೋಂಬೆ ಬಂಟ್ಸ್ ಅಸೋಸಿಯೇಶನ್ ವಿಶ್ವಸ್ತ ರಘುರಾಮ ಕೆ. ಶೆಟ್ಟಿ, ಬೋಂಬೆ ಬಂಟ್ಸ್ ಅಸೋಸಿಯೇಶನ್ ಉಪಾಧ್ಯಕ್ಷ ಮುರಳಿ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸುರೇಂದ್ರ ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ವಿಶ್ವನಾಥ ಎಸ್. ಶೆಟ್ಟಿ, ಜತೆ ಕಾರ್ಯದರ್ಶಿ ನ್ಯಾಯವಾದಿ ಗುಣಕರ ಡಿ. ಶೆಟ್ಟಿ, ಜತೆ ಕೋಶಾಧಿಕಾರಿ ಶ್ಯಾಮ್‌ಸುಂದರ್ ಎಸ್. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾರದಾ ಎಸ್. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಚರಣ್ ಆರ್. ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ವಿಶ್ವನಾಥ ವಿ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷೆ ಸರಳಾ ಬಿ. ಶೆಟ್ಟಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ಪ್ರಸ್ತುತ ವರ್ಷ 1000 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವನ್ನು ಗಣ್ಯರ ಉಪಸ್ಥಿತಿಯಲ್ಲಿ ವಿತರಿಸಲಾಯಿತು. ಶಿಕ್ಷಕಿ ಅಮೃತಾ ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸುರೇಂದ್ರ ಶೆಟ್ಟಿ ವಂದಿಸಿದರು. ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗ-ಯುವ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯ-ಸದಸ್ಯೆಯರು ಸಹಕರಿಸಿದರು. ಸಮಾಜ ಬಾಂಧವರು, ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಚಿತ್ರ-ವರದಿ: ಸುಭಾಷ್ ಶಿರಿಯಾ